ಮಂಗಳೂರು:ನಗರದ ಸುತ್ತಮುತ್ತಲಿರುವ ಬೀಚ್‌ಗಳಿಗೆ ಇಂದು (ಶುಕ್ರವಾರ) ಸಂಜೆ 7 ಗಂಟೆಯ ಬಳಿಕ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ದಕ್ಚಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.
ಮಂಗಳೂರಿನ ಪ್ರಮುಖ ಬೀಚ್‌ಗಳಿಗೆ ಸಾರ್ವಜನಿಕರಿಗೆ ನಿರ್ಬಂಧ ಕೋವಿಡ್ ಹಾಗೂ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಇಂದು ಸಂಜೆ 7 ಗಂಟೆಯಿಂದ ದ.ಕ. ಜಿಲ್ಲಾದ್ಯಂತ ಬೀಚ್ಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಈ ಮೂಲಕ ಕಿನಾರೆಯಲ್ಲಿ ಹೊಸ ವರ್ಷಾಚರಣೆ ನಡೆಸುವುದಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.
ಮಂಗಳೂರಿನ ಪಣಂಬೂರು, ತಣ್ಣೀರು ಬಾವಿ, ಸೋಮೇಶ್ವರ, ಉಳ್ಳಾಲ, ಮುಕ್ಕ, ಸುರತ್ಕಲ್, ಕೆಆರ್ಇಸಿ ಬೀಚ್‌ಗಳಿಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಬ್ಯಾರಿಕೇಡ್ಗಳನ್ನು ಅಳವಡಿಸಿ ಯಾರೂ ಬೀಚ್ಗಳಲ್ಲಿ ಮೋಜು ಮಸ್ತಿಯಲ್ಲಿ ತೊಡಗದಂತೆ ಕಟ್ಟೆಚ್ಚರ ವಹಿಸಲಾಗುತ್ತದೆ ಎಂದು ಆದೇಶ ಹೊರಡಿಸಿದ್ದಾರೆ. ಅಲ್ಲದೇ ಈ ನಿರ್ಬಂಧ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ:ಮಹಾರಾಷ್ಟ್ರದಲ್ಲಿ ಕೋವಿಡ್ ಏರಿಕೆ: ಸಮಾರಂಭಗಳಿಗೆ 50 ಜನರಿಗೆ ಮಾತ್ರ ಅವಕಾಶ