ಮಂಗಳೂರು:ಉಗ್ರ ಗೋಡೆಬರಹ ಬರೆದು ಬಂಧಿತರಾಗಿರುವ ಇಬ್ಬರು ಆರೋಪಿಗಳ ಕೊರೊನಾ ವರದಿ ನೆಗೆಟಿವ್ ಬಂದಿದ್ದು, ಇಂದು ಮತ್ತೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.
ಗೋಡೆ ಬರಹ ಪ್ರಕರಣದಲ್ಲಿ ಬಂಧಿತರಾಗಿರುವ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರು ಮೂಲದವರಾಗಿರುವ ಹಾಗೂ ಇದೀಗ ತೀರ್ಥಹಳ್ಳಿ ನೆಲೆಸಿರುವ ಮಾಝ್ ಮುನೀರ್ (21) ಮತ್ತು ಮುಹಮ್ಮದ್ ಶಾರೀಕ್ (22) ಎಂಬಿಬ್ಬರನ್ನು ಭಾನುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಳಿಕ ಕೊರೊನಾ ತಪಾಸಣೆ ಹಿನ್ನೆಲೆಯಲ್ಲಿ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ನಿನ್ನೆ ಕೊರೊನಾ ವರದಿ ನೆಗೆಟಿವ್ ಬಂದಿದೆ. ಹಾಗಾಗಿ, ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.