ಕರ್ನಾಟಕ

karnataka

ETV Bharat / city

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: ವಕೀಲರಿಗೆ ನ್ಯಾಯಾಂಗ ಬಂಧನ

ಕಾನೂನು ವಿದ್ಯಾರ್ಥಿನಿ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ಇಂದು ಕೋರ್ಟ್​ಗೆ ಹಾಜರಾದ ಆರೋಪಿ ರಾಜೇಶ್ ಭಟ್​ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ
ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ

By

Published : Dec 20, 2021, 4:04 PM IST

Updated : Dec 20, 2021, 8:26 PM IST

ಮಂಗಳೂರು:ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಆರೋಪಿ ವಕೀಲ ಕೆಎಸ್ಎನ್ ರಾಜೇಶ್ ಭಟ್ ಅವರಿಗೆ ಇಂದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣ ಬಳಿಕ ಆರೋಪಿ ನಾಪತ್ತೆಯಾಗಿ ಇಂದು ಕೋರ್ಟ್​ಗೆ ಹಾಜರಾಗಿದ್ದರು.

ಇಂದು ನ್ಯಾಯಾಲಯವು ಆರೋಪಿಯ ಜಾಮಿನು ಅರ್ಜಿ ತಿರಸ್ಕರಿಸಿ, ನ್ಯಾಯಾಂಗ ಬಂಧನ ವಿಧಿಸಿದೆ. ಅಲ್ಲದೇ ಆರೋಪಿ ರಾಜೇಶ್ ಭಟ್​ಗೆ ಆರೋಗ್ಯ ತೊಂದರೆ ಇರುವುದರಿಂದ ವೈದ್ಯಕೀಯ ಚಿಕಿತ್ಸೆ ನೀಡುವಂತೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ.

ವಕೀಲ ರಾಜೇಶ್ ಅವರು ತಮ್ಮ ಕಚೇರಿಯಲ್ಲಿ ಇಂಟರ್ನ್​ಶಿಪ್​ಗೆ ಬಂದಿದ್ದ ಕಾನೂನು ಕಾಲೇಜಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು. ಜೊತೆಗೆ ದೂರು ನೀಡದಂತೆ ಬೆದರಿಕೆ ಹಾಕಿದ್ದರು ಎಂದು ಸಂತ್ರಸ್ತೆ ವಿದ್ಯಾರ್ಥಿನಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: ವಕೀಲರಿಗೆ ನ್ಯಾಯಾಂಗ ಬಂಧನ

ಆ ಬಳಿಕ ವಕೀಲ ರಾಜೇಶ್ ನಾಪತ್ತೆಯಾಗಿದ್ದರು. ವಕೀಲ ರಾಜೇಶ್ ಬ್ಯಾಂಕ್ ಖಾತೆ ಸ್ಥಗಿತಗೊಳಿಸಿ, ಲುಕ್​​ಔಟ್ ನೋಟೀಸ್ ಜಾರಿಗೊಳಿಸಲಾಗಿತ್ತು. ಆರೋಪಿ ವಕೀಲರಿಗೆ ಸಹಕಾರ ನೀಡಿದ ಕಾರಣಕ್ಕೆ ವಕೀಲನ ಪತ್ನಿ ಸೇರಿದಂತೆ ಹಲವರನ್ನು ಬಂಧಿಸಲ್ಪಟ್ಟಿದ್ದರೂ ಆರೋಪಿ ಪತ್ತೆಯಾಗಿರಲಿಲ್ಲ. ಇದೀಗ ಆರೋಪಿ ಘಟನೆ ನಡೆದ ತಿಂಗಳುಗಳ ಬಳಿಕ ನ್ಯಾಯಾಲಯದ ಮುಂದೆ ಇಂದು ಶರಣಾಗಿದ್ದರು.

(ಇದನ್ನೂ ಓದಿ:ಮುಂಬೈನ ರೆಸ್ಟೋರೆಂಟ್​ನಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್ ದೇವರಕೊಂಡ- ರಶ್ಮಿಕಾ ಮಂದಣ್ಣ)

Last Updated : Dec 20, 2021, 8:26 PM IST

ABOUT THE AUTHOR

...view details