ಮಂಗಳೂರು:ಮಂಗಳೂರಿನಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ, ಕತ್ತು ಹಿಸುಕಿ ಕೊಲೆ ಮಾಡಿದ ಆರೋಪಿಗಳನ್ನು ಗುಂಡಿಟ್ಟು ಕೊಲ್ಲಬೇಕು ಎಂದು ಕಾಂಗ್ರೆಸ್ ಮುಖಂಡೆ ಪ್ರತಿಭಾ ಕುಳಾಯಿ ಹೇಳಿದರು. ಸಣ್ಣ ಮಕ್ಕಳ ಮೇಲೆ ಪೈಶಾಚಿಕ ಕೃತ್ಯಗಳು ಹೆಚ್ಚಾಗುತ್ತಿದ್ದು, ಕಾಮುಕರಿಗೆ ಸರಿಯಾದ ಪಾಠ ಕಲಿಸುವಂತೆ ಅವರು ಆಗ್ರಹಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ 2 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ನೀರಿನ ಟ್ಯಾಂಕ್ನಲ್ಲಿ ಬಿಸಾಡಲಾಗಿತ್ತು. ಇದೀಗ 8 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಹತ್ಯೆಗೈದು ಚರಂಡಿಗೆ ಬಿಸಾಡಲಾಗಿದೆ. ಪ್ರಕರಣದ ಆರೋಪಿಗಳನ್ನು ಗುಂಡಿಕ್ಕಿ ಸಾಯಿಸಬೇಕು ಎಂದು ಒತ್ತಾಯಿಸಿದರು.