ಮಂಗಳೂರು: ಮಂಗಳೂರಿನ ವಿದ್ಯಾರ್ಥಿನಿ ಅನನ್ಯಾ ಸಿಂಗ್ ಅವರು 'ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್' ಗೌರವಕ್ಕೆ ಪಾತ್ರರಾಗಿದ್ದಾರೆ.
ನವದೆಹಲಿಯ ಗ್ಲೋಬಲ್ ಇಂಡಿಯಾ ಎಂಟರ್ಟೈನ್ಮೆಂಟ್ ಪ್ರೊಡಕ್ಷನ್ (Global India Entrainment Production) ಆಯೋಜಿಸಿದ್ದ ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್ 2021 ಸ್ಪರ್ಧೆಯಲ್ಲಿ ಭಾಗವಹಿಸಿದ ಅನನ್ಯಾ ಸಿಂಗ್ ಅವರಿಗೆ ಈ ಗೌರವ ಸಿಕ್ಕಿದೆ. ಅನನ್ಯಾ ಸಿಂಗ್ ಅವರು ಸ್ಕೂಲ್ ಆಫ್ ಸೋಷಿಯಲ್ ವರ್ಕ್ ರೋಶನಿ ನಿಲಯದ ವಿದ್ಯಾರ್ಥಿನಿಯಾಗಿದ್ದಾರೆ.