ಮಂಗಳೂರು:ನೆರೆ ಸಂತ್ರಸ್ತರಿಗಾಗಿ ಮನೆ ನಿರ್ಮಾಣಕ್ಕೆ ಸರ್ಕಾರ ನೀಡಿದ್ದ ಅನುದಾನ ಸಂತ್ರಸ್ತರಿಗೆ ತಲುಪಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭೆಯಲ್ಲಿ ಆಕ್ರೋಶ ವ್ಯಕ್ತವಾಯಿತು.
ನೆರೆ ಸಂತ್ರಸ್ತರ ನಿವೇಶನಕ್ಕೆ ಸಿಗದ ಅನುದಾನ: ಜಿ.ಪಂ ಸಭೆಯಲ್ಲಿ ಭುಗಿಲೆದ್ದ ಆಕ್ರೋಶ - ದ.ಕ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ನೇತೃತ್ವದಲ್ಲಿ ಸಾಮಾನ್ಯ ಸಭೆ
ದ.ಕ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ನೇತೃತ್ವದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಕಳೆದ ಬಾರಿಯ ನೆರೆ ಸಂತ್ರಸ್ತರಿಗಾಗಿ ಮನೆ ನಿರ್ಮಾಣಕ್ಕೆ ಸರ್ಕಾರ ನೀಡಿದ್ದ ಅನುದಾನ ಬಿಡುಗಡೆಯಾಗದಿರುವುದಕ್ಕೆ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.
ದ.ಕ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ನೇತೃತ್ವದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ, ನೆರೆಯ ಸಂದರ್ಭದಲ್ಲಿ ಹಲವು ಮನೆಗಳು ಸಂಪೂರ್ಣ ಕುಸಿದಿದ್ದು, ಇದರ ಪುನರ್ ನಿರ್ಮಾಣಕ್ಕೆ ಪೂರ್ಣ ಅನುದಾನ ಬಿಡುಗಡೆಯಾಗದಿರುವುದಕ್ಕೆ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಈಗಾಗಲೇ ಕೆಲವು ಮನೆಗಳಿಗೆ 1 ಲಕ್ಷ ರೂ ಅನುದಾನ ನೀಡಲಾಗಿದ್ದು, ಜಿಪಿಎಸ್ ಬಳಿಕ ಮುಂದಿನ ಅನುದಾನ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು. ಈ ಸಂದರ್ಭದಲ್ಲಿ ಉತ್ತರಿಸಿದ ಸಿಇಒ ಡಾ. ಆರ್ ಸೆಲ್ವಮಣಿ, ಈ ಬಗ್ಗೆ ಸಂಬಂಧಿಸಿದ ಪಿಡಿಒಗಳನ್ನು ಕರೆಸಿ ಸಭೆ ನಡೆಸಲಾಗುವುದು ಎಂದು ಹೇಳಿದರು.
ಇದಕ್ಕೂ ಮುನ್ನ ಶುದ್ಧ ಕುಡಿಯುವ ನೀರಿನ ಘಟಕದ ಅನುಷ್ಠಾನ ಹಾಗೂ ನಿರ್ವಹಣೆ ಬಗ್ಗೆ ನಡೆದ ಚರ್ಚೆಯಲ್ಲಿ ಕೆಆರ್ಐಡಿಎಲ್ ಕಾಮಗಾರಿ ವಿಳಂಬದ ಬಗ್ಗೆ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಲಾಯಿತು.