ಕರ್ನಾಟಕ

karnataka

ETV Bharat / city

ಲಂಚ ಸ್ವೀಕಾರ ಪ್ರಕರಣ: ದ್ವಿತೀಯ ದರ್ಜೆ ಸಹಾಯಕನ ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ - ಮಂಗಳೂರು ತಾಲೂಕು ಕಚೇರಿ

ಮಂಗಳೂರು ತಾಲೂಕು ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರಫೀಕ್ ಎಂಬುವರ ಜಾಮೀನು ಅರ್ಜಿಯನ್ನು ಮಂಗಳೂರಿನ ಮೂರನೇ ಜೆಎಂಎಫ್ ನ್ಯಾಯಾಲಯ ವಜಾಗೊಳಿಸಿದೆ.

Court dismisses Rafiq bail application
ಮಂಗಳೂರಿನ ಮೂರನೇ ಜೆಎಂಎಫ್ ನ್ಯಾಯಾಲಯ

By

Published : Jan 20, 2021, 5:27 PM IST

ಮಂಗಳೂರು: ಕೆಐಎಡಿಬಿ ಭೂ ಸ್ವಾಧೀನ ಪರಿಹಾರದ ಅರ್ಜಿ ವಿಲೇವಾರಿ ಮಾಡಲು‌ ಲಂಚ ಸ್ವೀಕರಿಸಿದ್ದ ಮಂಗಳೂರು ತಾಲೂಕು ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರಫೀಕ್ ಎಂಬುವರ ಜಾಮೀನು ಅರ್ಜಿಯನ್ನು ಮಂಗಳೂರಿನ ಮೂರನೇ ಜೆಎಂಎಫ್ ನ್ಯಾಯಾಲಯ ವಜಾಗೊಳಿಸಿದೆ.

ಆರೋಪಿ ರಫೀಕ್ ತೋಕೂರು ಭೂ ಸ್ವಾಧೀನ ಪರಿಹಾರದ ಅರ್ಜಿ ವಿಲೇವಾರಿ ಮಾಡಲು ಓಸ್ವಲ್ಡ್ ವೇಗಸ್ ಎಂಬುವರಿಂದ 40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ಮಂಗಳೂರು ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್​ಪಿ ಕೆ.ಸಿ.ಪ್ರಕಾಶ್ ಮತ್ತು ಇನ್ಸ್‌ಪೆಕ್ಟರ್ ಶ್ಯಾಮ್ ಸುಂದರ್ ಹಾಗೂ ಗುರುರಾಜ್ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಯನ್ನು ಜ. 5ರಂದು ಬಂಧಿಸಿದ್ದರು. ಆರೋಪಿ ರಫೀಕ್ ಇದೀಗ ಮಂಗಳೂರಿನ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಜಾಮೀನಿಗೆ ಅರ್ಜಿ ಸಲ್ಲಿಸಿದ್ದ.

ಭ್ರಷ್ಟಾಚಾರ ನಿಗ್ರಹ ದಳದ ಪರ ವಿಶೇಷ ಸರ್ಕಾರಿ ಅಭಿಯೋಜಕ ಕೆ.ಎಸ್.ಎನ್.ರಾಜೇಶ್ ಜಾಮೀನು ಅರ್ಜಿಗೆ ಪ್ರಬಲ ಆಕ್ಷೇಪ ವ್ಯಕ್ತಪಡಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಮಂಗಳೂರಿನ ಮೂರನೇ ಜೆಎಂಎಫ್ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ.ಜಕಾತಿ, ಅಪರಾಧದ ಗಂಭೀರತೆಯನ್ನು ಪರಿಗಣಿಸಿ, ಸದರಿ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ.

ಭ್ರಷ್ಟಾಚಾರದಂತಹ ಗಂಭೀರ ಪ್ರಕರಣದಲ್ಲಿ ತನಿಖೆ ಸಂಪೂರ್ಣಗೊಳ್ಳುವ ಮೊದಲು ಆರೋಪಿಗೆ ಜಾಮೀನು ನೀಡಿದಲ್ಲಿ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ನ್ಯಾಯಾಧೀಶ ಬಿ.ಬಿ.ಜಕಾತಿ ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ABOUT THE AUTHOR

...view details