ಮಂಗಳೂರು: ನಗರದ ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಎಂಬಿಬಿಎಸ್ ಇಂಟರ್ಶಿಪ್ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಆನಂದನಗರ ನಿವಾಸಿ ವೈಶಾಲಿ ಗಾಯಕವಾಡ್ (25) ಮೃತ ವಿದ್ಯಾರ್ಥಿನಿ.
ಮಂಗಳೂರಲ್ಲಿ ನೇಣು ಬಿಗಿದುಕೊಂಡು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ - ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ
MBBS student committed suicide in Mangalore: ನಾಟೆಕಲ್ ಕಣಚೂರು ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುತ್ತಾರು ಬಳಿ ನಡೆದಿದೆ.
ವಿದ್ಯಾರ್ಥಿನಿ ಆತ್ಮಹತ್ಯೆ
ವಿದ್ಯಾರ್ಥಿನಿ ವೈಶಾಲಿ ಮಂಗಳೂರು ನಗರದ ದೇರಳಕಟ್ಟೆಯಲ್ಲಿರುವ ಕಣಚೂರು ಆಸ್ಪತ್ರೆಯಲ್ಲಿ ಇಂಟರ್ಶಿಪ್ ಮಾಡುತ್ತಿದ್ದಳು. ನಾಟೆಕಲ್ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಮುಗಿಸಿದ ಇವಳು, ಭಾನುವಾರ ತಾನು ವಾಸವಾಗಿದ್ದ ಕುತ್ತಾರಿನ ಸಿಲಿಕಾನಿಯಾ ಅಪಾರ್ಟ್ಮೆಂಟ್ವೊಂದರ ಕೋಣೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.