ಶಿವಮೊಗ್ಗ: ಐರನ್ ಬಾಕ್ಸ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಎಂಬಿಬಿಎಸ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಗರದ ಪುರಲೆ ಬಡಾವಣೆಯಲ್ಲಿ ನಡೆದಿದೆ.
ಐರನ್ ಬಾಕ್ಸ್ ಶಾರ್ಟ್ ಸರ್ಕ್ಯೂಟ್: ಎಂಬಿಬಿಎಸ್ ವಿದ್ಯಾರ್ಥಿ ಸಾವು!
ಐರನ್ ಬಾಕ್ಸ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಎಂಬಿಬಿಎಸ್ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ನಗರದ ಪುರಲೆ ಬಡಾವಣೆಯಲ್ಲಿ ನಡೆದಿದೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಂಬಿಬಿಎಸ್ ವಿದ್ಯಾರ್ಥಿ ಸಾವು
ದಾವಣಗೆರೆ ಮೂಲದ ನಿತಿನ್(23) ಮೃತಪಟ್ಟ ವೈದ್ಯ ವಿದ್ಯಾರ್ಥಿ. ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ನಿತಿನ್, ನಿನ್ನೆ ರಾತ್ರಿ ಐರನ್ ಬಾಕ್ಸ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರ ತನಿಖೆಯಿಂದ ವಿದ್ಯಾರ್ಥಿ ಸಾವಿಗೆ ನಿಖರ ಕಾರಣ ತಿಳಿದುಬರಬೇಕಿದೆ.