ಕರ್ನಾಟಕ

karnataka

ETV Bharat / city

ಇಂದಿನಿಂದ ಕರಾವಳಿಯಲ್ಲಿ ಯಾಂತ್ರೀಕೃತ ಮೀನುಗಾರಿಕೆ ನಿಷೇಧ - ಮಂಗಳೂರು ಸುದ್ದಿ

ಕರಾವಳಿಯಲ್ಲಿ ಇಂದಿನಿಂದ ಜುಲೈ 31ರವರೆಗೆ ಎರಡು ತಿಂಗಳುಗಳ ಕಾಲ ಎಲ್ಲಾ ರೀತಿಯ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ. ಆದ್ರೆ, ನಾಡದೋಣಿ ಮೀನುಗಾರಿಕೆಗೆ ಮಾತ್ರ ಅವಕಾಶ ನೀಡಲಾಗಿದೆ..

fishing
ಮೀನುಗಾರಿಕೆ

By

Published : Jun 1, 2021, 11:31 AM IST

ಮಂಗಳೂರು : ರಾಜ್ಯದ ಕರಾವಳಿಯಲ್ಲಿ ಇಂದಿನಿಂದ ಜುಲೈ 31ರವರೆಗೆ ಎರಡು ತಿಂಗಳುಗಳ ಕಾಲ ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯಿದೆಯನ್ವಯ ಎಲ್ಲಾ ರೀತಿಯ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ.

ಈ ಸಂದರ್ಭ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆಗೆ ಮಾತ್ರ ಅವಕಾಶ ನೀಡಲಾಗಿದೆ. ಪಶುಸಂಗೋಪನೆ ಮತ್ತು ಮೀನುಗಾರಿಕಾ ಸಚಿವಾಲಯದ ಆದೇಶದಂತೆ ಪಶ್ಚಿಮ ಕರಾವಳಿಯ ಎಲ್ಲಾ ರಾಜ್ಯಗಳ ಆರ್ಥಿಕ ವಲಯದ 200 ನಾಟಿಕಲ್ ಮೈಲು ಜಲ ಪ್ರದೇಶದಲ್ಲಿ ಈ ನಿಷೇಧ ಜಾರಿಗೊಳಿಸಲಾಗಿದೆ.

ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿ ಮೀನುಗಾರಿಕೆಗೆ ತೆರಳುವ ದೋಣಿಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತದೆ. ಅಲ್ಲದೆ ಒಂದು ವರ್ಷಗಳ ಕಾಲ ಡೀಸೆಲ್‌ ಮೇಲಿನ ಸಹಾಯಧನ ರದ್ದುಪಡಿಸಲಾಗುತ್ತದೆ. ಈ ಎಲ್ಲಾ ಆದೇಶಗಳನ್ನು ಪಾಲಿಸಬೇಕೆಂದು ಮೀನುಗಾರಿಕಾ ಇಲಾಖೆಯ ಹಿರಿಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

ABOUT THE AUTHOR

...view details