ಮಂಗಳೂರು:ಕೊರೊನಾ ಆತಂಕದ ನಡುವೆಯೇ ಮಂಗಳೂರಿನಲ್ಲಿ ಮತ್ತೆ ತಲ್ವಾರ್ ಝಳಪಿಸಿದ್ದು, ದುಷ್ಕರ್ಮಿಗಳ ತಂಡವೊಂದು ಮೂವರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ನಗರದ ಬಜಿಲಕೇರಿಯಲ್ಲಿ ನಡೆದಿದೆ.
ಮಂಗಳೂರು: ಯುವಕರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ದುಷ್ಕರ್ಮಿಗಳು - ಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ
ಮಂಗಳೂರಿನ ಬಜಿಲಕೇರಿಯಲ್ಲಿ ಮೂವರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ದುಷ್ಕರ್ಮಿಗಳು
ಘಟನೆಯಲ್ಲಿ ಗಾಯಗೊಂಡಿರುವ ಯುವಕರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದ ಸಂದರ್ಭ ಮತ್ತೆ ಕಾರುಗಳಲ್ಲಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಬಂದ ದುಷ್ಕರ್ಮಿಗಳು ಅಲ್ಲಿದ್ದ ಮನೆಗಳ ಮುಂಭಾಗದಲ್ಲಿನ ವಸ್ತುಗಳಿಗೆ ಹಾನಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.