ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರಿಗೆ ಕೊರೊನಾ ಸೋಂಕು ತಗುಲಿದೆ.
ದ.ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಗೆ ಕೊರೊನಾ ಸೋಂಕು
ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿದೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಅವರ ಜೊತೆ ಸಂಪರ್ಕ ಹೊಂದಿದವರನ್ನು ಪರೀಕ್ಷೆಗೆ ತೆರಳುವಂತೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಬೆಂಗಳೂರಿನಲ್ಲಿ ಕ್ವಾರಂಟೈನ್ ಆಗಿದ್ದೇನೆ. ನಿಮ್ಮೆಲ್ಲರ ಪ್ರೀತಿ ಮತ್ತು ಆಶೀರ್ವಾದದಲ್ಲಿ ಶೀಘ್ರ ಗುಣಮುಖನಾಗಿ ಸೇವೆಗೆ ಮರಳುತ್ತೇನೆ. ನನ್ನ ಜೊತೆಗೆ ಕೆಲದಿನಗಳಿಂದ ಹತ್ತಿರದ ಸಂಪರ್ಕ ಹೊಂದಿದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಬರೆದಿದ್ದಾರೆ.
ಮಿಥುನ್ ರೈ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದು, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯಾಗಿದ್ದರು. ಅಲ್ಲದೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ.