ಕರ್ನಾಟಕ

karnataka

ETV Bharat / city

ಬಂಟ್ವಾಳದಲ್ಲಿ ಕೊರೊನಾ ಸೋಂಕು ಹೆಚ್ಚಳ : ಕಠಿಣ ಮಾರ್ಗಸೂಚಿಗಳ ಜಾರಿಗೆ ಶಾಸಕರ ನೇತೃತ್ವದ ಸಭೆಯಲ್ಲಿ ನಿರ್ಣಯ

ಆದಾಗ್ಯೂ ಜನರಿಗೆ ಭಯಹುಟ್ಟಿಸುವ ರೀತಿಯ ಅಪಪ್ರಚಾರಗಳಿಗೆ ಕಡಿವಾಣ ಹಾಕಬೇಕು, ಈ ಸಂದರ್ಭ ಯಾವುದೇ ಸಮಸ್ಯೆಗಳಿದ್ದರೆ ಅದನ್ನು ಬಗೆಹರಿಸುವ ಕಾರ್ಯ ಮಾಡಬೇಕು. ಈ ಕುರಿತು ವಿಶೇಷ ತಂಡ ರಚಸಿ..

mla rajesh naik meeting to implement Tough Rules in bantwal
ಶಾಸಕ ರಾಜೇಶ್ ನಾಯ್ಕ್

By

Published : May 8, 2021, 9:22 PM IST

ಬಂಟ್ವಾಳ : ತಾಲೂಕಿನಲ್ಲಿ ಎಲ್ಲ ವ್ಯವಸ್ಥೆಗಳಿವೆ. ಕೊರೊನಾ ನಿಯಂತ್ರಣಕ್ಕೆ ಇರುವ ಕಠಿಣ ನಿಯಮಗಳನ್ನು ಅನುಷ್ಠಾನಗೊಳಿಸಿ ಎಂದು ಅಧಿಕಾರಿಗಳಿಗೆ ಶಾಸಕ ರಾಜೇಶ್ ನಾಯ್ಕ್ ಆದೇಶಿಸಿದರು. ಅಲ್ಲದೆ, ಸಮಸ್ಯೆಗಳಿದ್ದರೆ ಕೂಡಲೇ ಸಹಾಯವಾಣಿ ಗಮನಕ್ಕೆ ತನ್ನಿ ಎಂದು ಜನತೆಗೆ ಮನವಿ ಮಾಡಿದ್ದಾರೆ.

ಕೊರೊನಾ ನಿಯಂತ್ರಣ ಹಿನ್ನೆಲೆ ಬಂಟ್ವಾಳ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕರು, ಸೋಂಕು ಹರಡದಂತೆ ಸರ್ಕಾರ ವಿಧಿಸಿರುವ ಕರ್ಫ್ಯೂ ಸಹಿತ ಪ್ರತಿಬಂಧಕ ಕ್ರಮಗಳ ಕಟ್ಟುನಿಟ್ಟಿನಲ್ಲಿ ಅನುಷ್ಠಾನವಾಗಬೇಕು ಮತ್ತು ಆಸ್ಪತ್ರೆಯಲ್ಲಿ ಲಭ್ಯವಿರುವ ಸೌಲಭ್ಯಗಳ ಪ್ರತಿಯೊಂದು ಮಾಹಿತಿಯನ್ನೂ ಒದಗಿಸುವಂತೆ ಸೂಚಿಸಿದರು.

ಬೆಡ್, ಆಕ್ಸಿಜನ್ ಅಥವಾ ಆಸ್ಪತ್ರೆಗೆ ಯಾರನ್ನಾದರೂ ಸೇರಿಸುವ ವಿಚಾರದಲ್ಲಿ ತೊಂದರೆ, ಸಮಸ್ಯೆಗಳು ಉಂಟಾದಲ್ಲಿ ತಮಗೆ ಅಥವಾ ಕಾರ್ಯಪಡೆಗೆ ತಕ್ಷಣ ಮಾಹಿತಿ ಒದಗಿಸಿ, ದಿನದ ಇಪ್ಪತ್ತನಾಲ್ಕು ತಾಸೂ ತಾವು ಹಾಗೂ ತಮ್ಮ ಕಚೇರಿ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿತ್ತದೆ ಎಂದರು.

ಆದಾಗ್ಯೂ ಜನರಿಗೆ ಭಯಹುಟ್ಟಿಸುವ ರೀತಿಯ ಅಪಪ್ರಚಾರಗಳಿಗೆ ಕಡಿವಾಣ ಹಾಕಬೇಕು, ಈ ಸಂದರ್ಭ ಯಾವುದೇ ಸಮಸ್ಯೆಗಳಿದ್ದರೆ ಅದನ್ನು ಬಗೆಹರಿಸುವ ಕಾರ್ಯ ಮಾಡಬೇಕು. ಈ ಕುರಿತು ವಿಶೇಷ ತಂಡ ರಚಸಿ ಎಂದು ಹೇಳಿದರು.

ಸಭೆಯಲ್ಲಿ ಡಿವೈಎಸ್ಪಿ ವೆಲಂಟೈನ್ ಡಿಸೋಜ, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ತಹಸೀಲ್ದಾರ್ ರಶ್ಮಿ ಎಸ್.ಆರ್, ಇಒ ರಾಜಣ್ಣ, ತಾಲೂಕು ಮಟ್ಟದ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ABOUT THE AUTHOR

...view details