ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ಮತ್ತು ಶಾಸಕ ಡಾ.ವೈ.ಭರತ್ ಶೆಟ್ಟಿ ನಿನ್ನೆ ಮಧ್ಯಾಹ್ನ ಗುರುಪುರದಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸೇತುವೆಯ ಕಾಮಗಾರಿಯನ್ನು ವೀಕ್ಷಿಸಿದರು.
ಗುರುಪುರ ನೂತನ ಸೇತುವೆ ಫೆಬ್ರವರಿಗೆ ಲೋಕಾರ್ಪಣೆ: ಸಂಸದರ ಭರವಸೆ
ಗುರುಪುರ ಸೇತುವೆ ನಿರ್ಮಾಣ ಕಾಮಗಾರಿಯನ್ನು ಎಲ್ ಆ್ಯಂಡ್ ಟಿ ಕಂಪನಿ ಗುತ್ತಿಗೆ ವಹಿಸಿಕೊಂಡಿದೆ. ಈ ಸಂದರ್ಭದಲ್ಲಿ ಗುತ್ತಿಗೆದಾರ ಕಂಪನಿಯ ಅಧಿಕಾರಿಗಳೊಂದಿಗೆ ಸಂಸದ ನಳಿನ್ ಕುಮಾರ್ ಮಾತನಾಡಿ, ಕಾಮಗಾರಿಯ ಪ್ರಗತಿಯ ಬಗ್ಗೆ ಮಾಹಿತಿ ಪಡೆದರು.
ಗುರುಪುರ ಸೇತುವೆ ನಿರ್ಮಾಣ ಕಾಮಗಾರಿಯನ್ನು ಎಲ್ ಆ್ಯಂಡ್ ಟಿ ಕಂಪನಿ ಗುತ್ತಿಗೆ ವಹಿಸಿಕೊಂಡಿದೆ. ಈ ಸಂದರ್ಭದಲ್ಲಿ ಗುತ್ತಿಗೆದಾರ ಕಂಪನಿಯ ಅಧಿಕಾರಿಗಳೊಂದಿಗೆ ಸಂಸದ ನಳಿನ್ ಕುಮಾರ್ ಮಾತನಾಡಿ, ಕಾಮಗಾರಿಯ ಪ್ರಗತಿಯ ಬಗ್ಗೆ ಮಾಹಿತಿ ಪಡೆದರು.
ಸೇತುವೆ ಕಾಮಗಾರಿಯನ್ನು ವೇಗವಾಗಿ ಮುಗಿಸಿಕೊಂಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರು. 'ಕಾರ್ಕಳ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ- 169ರ ಫಲ್ಗುಣಿ ನದಿಗೆ ಅಡ್ಡಲಾಗಿ ಗುರುಪುರದಲ್ಲಿ ನೂತನ ಸೇತುವ ನಿರ್ಮಿಸಲಾಗುತ್ತಿದೆ. ನಿಗದಿತ ಅವಧಿಗೆ ಪೂರ್ಣಗೊಳ್ಳಲಿದ್ದು, ಮುಂದಿನ ವರ್ಷ ಫೆಬ್ರವರಿಗೆ ಲೋಕಾರ್ಪಣೆಗೊಳ್ಳಲಿದೆ' ಎಂದು ಹೇಳಿದರು.