ಮಂಗಳೂರು: ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದಲ್ಲಿದ್ದ ವನ್ಯಜೀವಿಗಳನ್ನು ಎಂಆರ್ಪಿಎಲ್ ಸಂಸ್ಥೆ ದತ್ತು ಪಡೆದುಕೊಂಡಿದೆ.
ಕೊರೊನಾ ಲಾಕ್ಡೌನ್ನಿಂದ ಪಿಲಿಕುಳ ಜೈವಿಕ ಉದ್ಯಾನವನದ ಆದಾಯ ಕಡಿಮೆಯಾಗಿತ್ತು. ಇದರಿಂದ 1,200 ವನ್ಯಜೀವಿಗಳನ್ನು ರಕ್ಷಿಸುವುದು ಸಮಸ್ಯೆಯಾಗಿತ್ತು. ಈ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು, ಎಂಆರ್ಪಿಎಲ್ಗೆ ಈ ಯೋಜನೆಯನ್ನು ಕೈಗೆತ್ತಿಕೊಳ್ಳುವಂತೆ ಶಿಫಾರಸು ಮಾಡಿದ್ದರು. ಅದರಂತೆ 1,200 ವನ್ಯಜೀವಿಗಳನ್ನು ರಕ್ಷಿಸಲು ಮತ್ತು ಆಹಾರ ವ್ಯವಸ್ಥೆ ಒದಗಿಸಲು ಎಂಆರ್ಪಿಎಲ್ ಒಪ್ಪಿಕೊಂಡಿದೆ.