ಮಂಗಳೂರು:ದಸರಾ ಹಬ್ಬದ ಪ್ರಯುಕ್ತ ಭಾನುವಾರ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು, ಮಂಗಳೂರು ದಸರಾದ ರೂವಾರಿಯಾಗಿರುವ, ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರನ್ನು ಭೇಟಿಯಾದರು.
ಜನಾರ್ದನ ಪೂಜಾರಿ ಕಾಲಿಗೆ ಬಿದ್ದು ನಮಸ್ಕರಿಸಿದ ನಳೀನ್ ಕುಮಾರ್ ಕಟೀಲ್ - ಬಿಜೆಪಿ ರಾಜ್ಯಾಧ್ಯಕ್ಷ, ಕುದ್ರೋಳಿ ಗೋಕರ್ಣನಾಥ ಕ್ಷೇತ್ರ
ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳೀನ್ ಕುಮಾರ್ ಕಟೀಲ್ ಭೇಟಿಯಾಗಿ ಆಶೀರ್ವಾದ ಪಡೆದರು.
![ಜನಾರ್ದನ ಪೂಜಾರಿ ಕಾಲಿಗೆ ಬಿದ್ದು ನಮಸ್ಕರಿಸಿದ ನಳೀನ್ ಕುಮಾರ್ ಕಟೀಲ್](https://etvbharatimages.akamaized.net/etvbharat/prod-images/768-512-4684352-thumbnail-3x2-sow.jpg)
ಜನಾರ್ದನ ಪೂಜಾರಿ ಅವರ ಕಾಲಿಗೆ ನಮಸ್ಕರಿಸಿದ ನಳೀನ್ ಕುಮಾರ್ ಕಟೀಲ್ ಅವರಿಗೆ ಜನಾರ್ದನ ಪೂಜಾರಿ ಆಶೀರ್ವಾದ ನೀಡಿದ್ದರು. ಈ ಸಂದರ್ಭದಲ್ಲಿ ಶಾಸಕ ವೇದವ್ಯಾಸ ಕಾಮತ್ ಜೊತೆಗಿದ್ದರು. ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವೇಳೆಯು ನಳೀನ್ ಕುಮಾರ್ ಕಟೀಲ್ ಅವರು ತಮ್ಮ ಪ್ರತಿಸ್ಪರ್ಧಿಯಾಗಿದ್ದ ಜನಾರ್ದನ ಪೂಜಾರಿ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದರು.
ಕಳೆದ ಬಾರಿ ಲೋಕಸಭಾ ಚುನಾವಣೆ ವೇಳೆಯು ಕಟೀಲ್ ಅವರು ಜನಾರ್ದನ ಪೂಜಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದರು. ಈ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ನಳಿನ್ ಕುಮಾರ್ ಕಟೀಲ್ ಅವರು ಮತ್ತೆ ಜನಾರ್ದನ ಪೂಜಾರಿ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡಿದ್ದಾರೆ.