ಮಂಗಳೂರು: ಬೆಂಕಿಯಿಲ್ಲದೇ ಹೊಗೆಯಾಡಲು ಸಾಧ್ಯವೇ? ಅಕ್ರಮಗಳ ಸರದಾರನನ್ನು ಜೈಲಿನಿಂದ ಮೆರವಣಿಗೆ ಮಾಡಿಕೊಂಡು ಬಂದು ಪಟ್ಟ ನೀಡುವಾಗಲೇ ಯೋಚಿಸಬೇಕಿತ್ತು. ತನಿಖಾ ಸಂಸ್ಥೆಗಳು ಸ್ವಾಯತ್ತವಾಗಿರುತ್ತವೆ ಎಂಬುದು ಲೋಕಸತ್ಯ. ಸಿಬಿಐ ದಾಳಿಯನ್ನು ಖಂಡಿಸುವ ಕಾಂಗ್ರೆಸ್ ನಾಯಕರು, ಏಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅಕ್ರಮಗಳನ್ನು ಖಂಡಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ.
ಡಿಕೆಶಿ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿರುವ ಮತ್ತು ಅದರ ಬಳಿಕ ನಡೆದ ಬೆಳವಣಿಗೆಯ ಹಿನ್ನೆಲೆಯಲ್ಲಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಅವರು, ಇದಕ್ಕೆ ಕಾಂಗ್ರೆಸ್ಸಿನ ರಾಷ್ಟ್ರೀಯ ನಾಯಕರು ಕುಮ್ಮಕ್ಕು ನೀಡುತ್ತಿರುವುದು ಅವರು ಪರೋಕ್ಷವಾಗಿ ಡಿಕೆಶಿ ಅವರ ಅಕ್ರಮ ಆಸ್ತಿ ಗಳಿಕೆಗೆ ಬೆಂಬಲ ಇದೆಯೆಂದು ಸಾಬೀತುಪಡಿಸಿದಂತೆ ಆಗಿದೆ. ಅಕ್ರಮ ಹಣ ಗಳಿಕೆಯಲ್ಲಿ ಕಾಂಗ್ರೆಸ್ ನಾಯಕರಿಗೂ ಪಾಲು ಇದೆಯೆಂದು ತೋರಿಸಿದಂತೆ ಆಗಿದೆ ಎಂದು ಆರೋಪಿಸಿದ್ದಾರೆ