ಕರ್ನಾಟಕ

karnataka

ETV Bharat / city

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಮತ್ತು ರಾತ್ರಿ ಕರ್ಫ್ಯೂ ಮುಂದುವರಿಕೆ - ಮಂಗಳೂರಿನ ಜಿಲ್ಲಾಧಿಕಾರಿ ಆದೇಶ

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ ಮತ್ತು ವಾರಾಂತ್ಯ ಕರ್ಫ್ಯೂ ಅನ್ನು ವಿಸ್ತರಣೆ ಮಾಡಲಾಗಿದೆ.

Night and weekend curfew extended in Mangaluru
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಮತ್ತು ರಾತ್ರಿ ಕರ್ಫ್ಯೂ ಮುಂದುವರಿಕೆ

By

Published : Aug 17, 2021, 12:24 AM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್​ 30ವರೆಗೆ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯ ಕರ್ಫ್ಯೂ ವಿಸ್ತರಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಹೊರಡಿಸಲಾಗಿದ್ದ ವಾರಾಂತ್ಯ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಆದೇಶ ಸೋಮವಾರಕ್ಕೆ ಕೊನೆಗೊಂಡಿದೆ. ಇದೀಗ ಆಗಸ್ಟ್​ 30ರವರೆಗೆ ಕರ್ಫ್ಯೂ0 ಮುಂದುವರಿಸಲಾಗಿದೆ.

ಜಿಲ್ಲೆಯಲ್ಲಿರುವ ಎಲ್ಲಾ ಪಬ್ ಮತ್ತು ಬಾರ್ ಆ್ಯಂಡ್ ರೆಸ್ಟೋರೆಂಟ್​​​ಗಳನ್ನು ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 7 ಗಂಟೆಯೊಳಗೆ ಮುಚ್ಚಲು ಆದೇಶಿಸಲಾಗಿದೆ.

ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಇದ್ದು, ಆಗಸ್ಟ್​​ 30ವರೆಗೆ ವಾರಾಂತ್ಯ ಕರ್ಫ್ಯೂ ಮುಂದುವರಿಯಲಿದೆ ಎಂದು ಆದೇಶಿಸಲಾಗಿದೆ.

ಇದನ್ನೂ ಓದಿ:ಬೆಳಗಾವಿಯಲ್ಲೂ ಬಿಜೆಪಿ ಧ್ವಜ ಹಾರಿಸುತ್ತೇವೆ: ನಳಿನ್​ ಕುಮಾರ್​ ಕಟೀಲ್​

ABOUT THE AUTHOR

...view details