ಕರ್ನಾಟಕ

karnataka

ETV Bharat / city

ಅಪ್ರಾಪ್ತೆಯೊಂದಿಗೆ ಪ್ರೀತಿಸುವ ನಾಟಕವಾಡಿ ಅತ್ಯಾಚಾರ ಆರೋಪ: ಯುವಕ ಅಂದರ್​​! - sulya rape case

ಸೊರಂಜ ಜಿತೇಶ್ ಎಂಬಾತ ಸುಳ್ಯದ ಹೈಸ್ಕೂಲ್ ವಿದ್ಯಾರ್ಥಿನಿಯೊಬ್ಬಳನ್ನು ಇನ್​​​ಸ್ಟಾಗ್ರಾಂನಲ್ಲಿ ಪರಿಚಯ ಮಾಡಿಕೊಂಡು, ಪ್ರೀತಿಯ ನಾಟಕವಾಡಿ ಮನೆಯಿಂದ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ ಎನ್ನುವ ಆರೋಪದಡಿ ಆತನನ್ನು ಬಂಧಿಸಲಾಗಿದೆ.

sulya police station
ಸುಳ್ಯ ಪೊಲೀಸ್​ ಠಾಣೆ

By

Published : Sep 15, 2021, 6:28 AM IST

ಸುಳ್ಯ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಬಾಲಕಿಯೊಂದಿಗೆ ಪ್ರೀತಿಸುವ ನಾಟಕವಾಡಿ ಅತ್ಯಾಚಾರ ನಡೆಸಿರುವ ಆರೋಪದಡಿ ಯುವಕನೊಬ್ಬನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಸೊರಂಜ ಜಿತೇಶ್ ಎಂಬಾತ ಸುಳ್ಯದ ಹೈಸ್ಕೂಲ್ ವಿದ್ಯಾರ್ಥಿನಿಯೊಬ್ಬಳನ್ನು ಇನ್​​​ಸ್ಟಾಗ್ರಾಂನಲ್ಲಿ ಪರಿಚಯ ಮಾಡಿಕೊಂಡಿದ್ದಾನೆ. ಆಕೆಯೊಂದಿಗೆ ಪ್ರೀತಿಯ ನಾಟಕವಾಡಿ ಮನೆಯಿಂದ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ:ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಗೆ 7 ವರ್ಷ ಕಠಿಣ ಶಿಕ್ಷೆ

ಈ ಬಗ್ಗೆ ವಿದ್ಯಾರ್ಥಿನಿ ಮನೆಯವರು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಆರೋಪಿ ಜಿತೇಶ್‌ನನ್ನು ಸುಳ್ಯದ ಅಡ್ಕಾರ್ ಎಂಬಲ್ಲಿ ಬಂಧಿಸಿದ್ದಾರೆ. ಯುವಕ ವಿದ್ಯಾರ್ಥಿನಿಯನ್ನು ಕರೆದೊಯ್ಯುತ್ತಿದ್ದ ಆಲ್ಟೋ ಕಾರನ್ನು ಕೂಡಾ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಯುವಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ABOUT THE AUTHOR

...view details