ಕರ್ನಾಟಕ

karnataka

ETV Bharat / city

Gold smuggling: ರಾಡ್, ಸ್ಟಿರಿಯೊ ಕೇಬಲ್ ಗಳಲ್ಲಿ ಅಕ್ರಮ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿ ಮಂಗಳೂರಲ್ಲಿ ವಶಕ್ಕೆ - ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಕೇರಳ ವ್ಯಕ್ತಿ ಅರೆಸ್ಟ್​

ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಕೇರಳ ಮೂಲದ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ​

one arrested under gold smuggling case at mangalore
ಅಕ್ರಮ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿ ಅರೆಸ್ಟ್

By

Published : Dec 14, 2021, 9:53 AM IST

ಮಂಗಳೂರು: ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಕೇರಳದ ಕಾಸರಗೋಡು ಮೂಲದ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ ಅಧಿಕಾರಿಗಳು ಸ್ವತ್ತು ಸಮೇತ ವಶಕ್ಕೆ ಪಡೆದುಕೊಂಡಿದ್ದಾರೆ.

ಈತ ಡಿಸೆಂಬರ್ 13 ರಂದು ಶಾರ್ಜಾದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಇಂಡಿಗೋ ವಿಮಾನದಲ್ಲಿ ಬಂದಿದ್ದ. ಈತನನ್ನು ತಪಾಸಣೆ ನಡೆಸಿದ ಕಸ್ಟಮ್ ಅಧಿಕಾರಿಗಳು 16,79,860 ರೂ. ಮೌಲ್ಯದ 338 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಚಿನ್ನವನ್ನು ಮೆಟಾಲಿಕ್ ರಾಡ್, ಸ್ಟಿರಿಯೊ ಕೇಬಲ್, ಬರ್ನರ್ ಸ್ಟ್ಯಾಂಡ್, ಕ್ಯಾಂಡಲ್ ಹೋಲ್ಡರ್ ಸ್ಟ್ಯಾಂಡ್​ಗಳಲ್ಲಿ ಆರೋಪಿ ಅಡಗಿಸಿ ತಂದಿದ್ದ.

ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಕಾಸರಗೋಡು ಮೂಲದ ವ್ಯಕ್ತಿಯನ್ನು ಕಸ್ಟಮ್ ಅಧಿಕಾರಿಗಳು ಚಿನ್ನ ಸಮೇತ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ:ವಿಧಾನ ಪರಿಷತ್ ಫೈಟ್: ಮತ ಎಣಿಕೆ - ಗ್ರೌಂಡ್​ ರಿಪೋರ್ಟ್​

ABOUT THE AUTHOR

...view details