ಮಂಗಳೂರು:ಮಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿತ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದರಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಮಂಗಳೂರಿನಲ್ಲಿ ಓರ್ವ ಮಹಿಳೆ ಸೋಂಕಿಗೆ ಬಲಿ - corona in mangaluru
ಕೊರೊನಾ ಸೋಂಕಿತ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನಲ್ಲಿ ಸಾವನ್ನಪ್ಪಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ
ರೋಗಿ ಸಂಖ್ಯೆ 536 ಆಗಿರುವ ಮಂಗಳೂರಿನ ಬೋಳೂರು ನಿವಾಸಿ 58 ವರ್ಷದ ಮಹಿಳೆ ಮೃತಪಟ್ಟವರು. ಫರ್ಸ್ಟ್ ನ್ಯೂರೋದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರಿಗೆ ಅಲ್ಲಿದ್ದ ಕೊರೊನಾ ಸೋಂಕಿತರಿಂದ ಕೊರೊನಾ ಹರಡಿತ್ತು. ಜೊತೆಗೆ ಮೆದುಳಿನ ಸೋಂಕಿನಿಂದ ಬಳಲುತ್ತಿದ್ದರು.
ಕಳೆದ ಕೆಲವು ದಿನಗಳಿಂದ ಇವರ ಆರೋಗ್ಯ ಸ್ಥಿತಿ ಗಂಭೀರವಿದ್ದು, ವೆಂಟಿಲೇಟರ್ ಅಳವಡಿಸಿ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇದರಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಇದಕ್ಕೂ ಮೊದಲು ಬಂಟ್ವಾಳ ಕಸಬಾ ಗ್ರಾಮದ ಒಂದೇ ಮನೆಯಲ್ಲಿದ್ದ ಅತ್ತೆ, ಸೊಸೆ ಮತ್ತು ನೆರೆಮನೆಯ ಮಹಿಳೆ ಸಾವನ್ನಪ್ಪಿದ್ದರು. ಇದರಿಂದ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.