ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪ್ರಕರಣ ದೃಢಪಟ್ಟಿದ್ದು ಜಿಲ್ಲೆಯಲ್ಲಿ ಕೋವಿಡ್ ಪೀಡಿತರ ಸಂಖ್ಯೆ ಎಂಟಕ್ಕೇರಿದೆ.
ದ.ಕ ಜಿಲ್ಲೆಯಲ್ಲಿ ಹೆಚ್ಚುತ್ತಲೇ ಇದೆ ಕೊರೊನಾ ಕಾವು: 8 ಕ್ಕೇರಿದ ಕೊರೊನಾ ಸೋಂಕಿತರು ಸಂಖ್ಯೆ
ರಾಜ್ಯದ ಕರಾವಳಿ ಗಡಿಭಾಗದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್ ಪ್ರಕರಣ ದಾಖಲಾಗಿದ್ದು, ಸೋಂಕಿತರ ಸಂಖ್ಯೆ ಎಂಟಕ್ಕೇರಿದೆ.
8 ಕ್ಕೇರಿದ ಕೊರೊನಾ ಸೋಂಕಿತರು ಸಂಖ್ಯೆ
ರಾಜ್ಯ ಬುಲೆಟಿನ್ನಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ 34 ವರ್ಷದ ಯುವಕನಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ.
ಈ ವ್ಯಕ್ತಿ ಮಾರ್ಚ್ 18 ರಂದು ದುಬೈನಿಂದ ಮಂಗಳೂರಿಗೆ ಬಂದಿದ್ದ. ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಈತನನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.