ಕರ್ನಾಟಕ

karnataka

ETV Bharat / city

ಬಾಲಕಿಗೆ ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ ದೌರ್ಜನ್ಯ.. ಬೆಳ್ತಂಗಡಿಯಲ್ಲಿ ಕಾಮುಕನ ವಿರುದ್ಧ ಪೋಕ್ಸೋ ಕೇಸ್​ - ಬೆಳ್ತಂಗಡಿ ಪೋಕ್ಸೋ ಪ್ರಕರಣ

Sexual harassment in Belthangady: ಅಪ್ರಾಪ್ತೆಗೆ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ವ್ಯಕ್ತಿಯೋರ್ವನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

Sexual harassment on minor at belthangady
ಬೆಳ್ತಂಗಡಿಯಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ

By

Published : Dec 14, 2021, 6:48 AM IST

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಕೊಯ್ಯೂರು ಗ್ರಾಮದ ನಾಲ್ಕನೇ ತರಗತಿಯ ಬಾಲಕಿಗೆ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವ್ಯಕ್ತಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಡಿ. 11 ರಂದು ಮಧ್ಯಾಹ್ನ 9 ವರ್ಷ ವಯಸ್ಸಿನ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲಕಿ ಮನೆಗೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಆರೋಪಿಯು ತೆರಳಿ ನಿರ್ಮಾಣ ಹಂತದಲ್ಲಿರುವ ಮನೆಗೆ ಕರೆದುಕೊಂಡು ಹೋಗಿದ್ದಾನೆ. ತನ್ನ ಮೊಬೈಲ್​​ನಲ್ಲಿದ್ದ ಅಶ್ಲೀಲ ಚಿತ್ರಗಳನ್ನು ತೋರಿಸಿದಾಗ ಬಾಲಕಿ ಹೆದರಿ ಕಿರುಚಿದ್ದಾಳೆ. ಕಿರುಚಿದರೆ ಕೊಲ್ಲುವುದಾಗಿ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ ಕುಟುಂಬಸ್ಥರು ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಸಂಬಂಧ ವ್ಯಕ್ತಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬಿಸಿನೀರಿನಿಂದ ಸಾವಿಗೀಡಾದ ಮಗು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ABOUT THE AUTHOR

...view details