ಮಂಗಳೂರು: ಗಾಯಕರು ಆಗಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಮಂಗಳೂರು ದಸರಾ ಕಾರ್ಯಕ್ರಮದಲ್ಲಿ ಕನ್ನಡ ಹಾಡಿನ ಜೊತೆಗೆ ತುಳು ಹಾಡು ಹಾಡಿ ರಂಜಿಸಿದರು.
ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವದ ಪ್ರಯುಕ್ತ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಹಾಕಲಾದ ವೇದಿಕೆಯಲ್ಲಿ ಸಾಂಸ್ಕೃತಿಕ,ಧಾರ್ಮಿಕ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಅವರು ಭಕ್ತಿಗೀತೆಗಳನ್ನು ಹಾಡಿದರು. ಕತ್ತಲೆ ಕೋಣೆಡ್ ಉಲ್ಲ ಎಂಬ ಖ್ಯಾತ ತುಳು ಭಕ್ತಿ ಗೀತೆ ಮತ್ತು ಇತರೆ ಭಕ್ತಿ ಗೀತೆಗಳನ್ನು ಹಾಡುವ ಮೂಲಕ ದಸರಾ ಕಾರ್ಯಕ್ರಮಕ್ಕೆ ಬಂದಿದ್ದವರ ಮನರಂಜಿಸಿದರು.