ಬಂಟ್ವಾಳ (ದಕ್ಷಿಣ ಕನ್ನಡ):ಮುಸ್ಲಿಂ ಮದುಮಗ ಕೊರಗಜ್ಜನ ವೇಷ ಧರಿಸಿ ಹಿಂದೂ ಸಂಪ್ರದಾಯಕ್ಕೆ ಅವಮಾನ ಮಾಡಿಲಾಗಿತ್ತು ಎಂದು ಆರೋಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ವಿಟ್ಲ ಇನ್ಸ್ಪೆಕ್ಟರ್ ನಾಗರಾಜ್ ಹೆಚ್ ನೇತೃತ್ವದ ತಂಡ ಎರ್ನಾಕುಲಂ ರೈಲ್ವೆ ನಿಲ್ದಾಣದಲ್ಲಿ ವಶಕ್ಕೆ ಪಡೆದುಕೊಂಡಿದೆ.
ಈ ಪ್ರಕರಣದ ಪ್ರಮುಖ ಆರೋಪಿ ಮದುಮಗ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಉಪ್ಪಳ ಸೋಂಕಲ್ ಅಗರ್ತಿಮೂಲೆ ಸಮೀಪದ ಉಮ್ರಲ್ಲಾ ಭಾಷಿತ್ ಎಂಬಾತನನ್ನು ಪೊಲೀಸರು ಎರ್ನಾಕುಲಂ ಜಿಲ್ಲೆಯ ರೈಲ್ವೆ ನಿಲ್ದಾಣದಿಂದ ವಶಕ್ಕೆ ಪಡೆದುಕೊಂಡು ವಿಟ್ಲ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಉಳಿದ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಮದುವೆ ಸಮಾರಂಭದಲ್ಲಿ ಮದುಮಗನಿಗೆ ದೈವ ಕೊರಗಜ್ಜನ ವೇಷ ಹಾಕಿ ಕುಣಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು. ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡಿದ್ದಾರೆ ಎನ್ನುವ ಕುರಿತು ದೂರು ದಾಖಲಾಗಿತ್ತು.