ಕರ್ನಾಟಕ

karnataka

ETV Bharat / city

ಮಂಗಳೂರು : ಹೃದಯಾಘಾತದಿಂದ ಪೊಲೀಸ್ ಹೆಡ್ ಕಾನ್ಸ್​​ಟೇಬಲ್ ನಿಧನ - ಹೃದಯಾಘಾತದಿಂದ ಪೊಲೀಸ್ ಹೆಡ್ ಕಾನ್ಸ್​​ಟೇಬಲ್ ನಿಧನ

ಶಿವಮೊಗ್ಗ ಜಿಲ್ಲೆಯ ಸೊರಬ ಮೂಲದ ಸಂತೋಷ್ ಕಳೆದ 12 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ‌ನಿರ್ವಹಿಸುತ್ತಿದ್ದರು. ಯುವ ಪೊಲೀಸ್ ಸಿಬ್ಬಂದಿಯ ನಿಧನಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ..

Police head constable died due to heart attack
ಹೆಡ್​​​ ಕಾನ್ಸ್​​​ಟೇಬಲ್ ಸಂತೋಷ್

By

Published : Jan 5, 2022, 12:42 PM IST

ಮಂಗಳೂರು :ಹೃದಯಾಘಾತದಿಂದ ಪೊಲೀಸ್ ಹೆಡ್ ಕಾನ್ಸ್​​ಟೇಬಲ್‌ವೊಬ್ಬರು‌ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ಮೂಡಬಿದ್ರೆ ಪೊಲೀಸ್ ಠಾಣೆಯ ಹೆಡ್​​​ ಕಾನ್ಸ್​​​ಟೇಬಲ್ ಸಂತೋಷ್ ಮೃತರು.

ಕಿರಿವಯಸ್ಸಿನ ಪೊಲೀಸ್ ಸಿಬ್ಬಂದಿಯಾಗಿದ್ದ ಸಂತೋಷ್ ಪ್ರಕರಣವೊಂದರ ಸಂಬಂಧ ಕಾರ್ಯಾಚರಣೆಗೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಗೆ ಹೋಗಿದ್ದರು. ಈ ವೇಳೆ ಅವರಿಗೆ ಹೃದಯಘಾತವಾಗಿದೆ ಎಂದು ತಿಳಿದು ಬಂದಿದೆ.

ಶಿವಮೊಗ್ಗ ಜಿಲ್ಲೆಯ ಸೊರಬ ಮೂಲದ ಸಂತೋಷ್ ಕಳೆದ 12 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ‌ನಿರ್ವಹಿಸುತ್ತಿದ್ದರು. ಯುವ ಪೊಲೀಸ್ ಸಿಬ್ಬಂದಿಯ ನಿಧನಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details