ಮಂಗಳೂರು:ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಗಮನದ ದಾರಿಯಲ್ಲಿ ನಡೆದ ಅಪಘಾತದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ವ್ಯಕ್ತಿಯೋರ್ವನನ್ನ ಬಜಪೆ ಠಾಣೆಯ ಪೋಲಿಸ್ ಸಿಬ್ಬಂದಿ ತನ್ನದೇ ಕಾರಲ್ಲಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿರುವ ಘಟನೆ ನಡೆದಿದೆ.
ಬಜಪೆ ಠಾಣೆಯ ಹೆಡ್ಕಾನ್ಸ್ಟೇಬಲ್ ಗೋಪಾಲಕೃಷ್ಣ ತಮ್ಮ ಕರ್ತವ್ಯ ಮುಗಿಸಿ ತೆರಳುತ್ತಿರುವ ಸಮಯದಲ್ಲಿ ಮಂಗಳೂರು ವಿಮಾನ ನಿಲ್ದಾಣದ ನಿರ್ಗಮನ ರಸ್ತೆಯ ಜಂಕ್ಷನ್‌ನಲ್ಲಿ ದ್ವಿಚಕ್ರ ವಾಹನಗಳೆರಡರ ಮಧ್ಯೆ ಅಪಘಾತ ಸಂಭವಿಸಿತ್ತು. ಘಟನೆಯಿಂದ ಅಮಾನುಲ್ಲಾ ಎಂಬುವವರು ಪ್ರಜ್ಞಾಹೀನಸ್ಥಿತಿಯಲ್ಲಿ ರಸ್ತೆಯಲ್ಲಿಯೇ ಬಿದ್ದಿದ್ದರು. ಕೂಡಲೇ ಗೋಪಾಲಕೃಷ್ಣ ತಮ್ಮದೇ ಕಾರಿನಲ್ಲಿ ಅವರನ್ನು ಎ.ಜೆ.ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮರೆದಿದ್ದಾರೆ.