ಮಂಗಳೂರು :ಕಡಲ್ಕೊರೆತ ಸಂತ್ರಸ್ತರಿಗೆ ಮೀಸಲಿಟ್ಟಿದ್ದ ಜಾಗದಲ್ಲಿ ಅಕ್ರಮವಾಗಿ ಮನೆಗಳನ್ನು ನಿರ್ಮಾಣ ಮಾಡಿರುವ ಬಿಲ್ಡರ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲದ ಕಡಲ್ಕೊರೆತ ಸಂತ್ರಸ್ತರಿಗೆ ಮಂಗಳೂರಿನ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಡ್ಯಾರು ಸಾಯಿ ನಗರದಲ್ಲಿ 1.22 ಎಕರೆ ಜಾಗ ಮೀಸಲಿಡಲಾಗಿತ್ತು.
ಕಡಲ್ಕೊರೆತ ಸಂತ್ರಸ್ತರಿಗೆ ಮೀಸಲಿಟ್ಟ ಜಾಗದಲ್ಲಿ ಮನೆ ನಿರ್ಮಾಣ : ಪೊಲೀಸ್ ದಾಳಿ, ಬಿಲ್ಡರ್ ವಿರುದ್ಧ ಪ್ರಕರಣ ದಾಖಲು - Police raid on illegal homes
ಅನಧಿಕೃತವಾಗಿ ಮನೆಗಳನ್ನು ನಿರ್ಮಿಸಿರುವ ಬಿಲ್ಡರ್ ಶರತ್ ರಾಜ್ ಮೇಲೆ ಪ್ರಕರಣ ದಾಖಲಾಗಿದ್ದು, ಮನೆಗಳನ್ನು ಕೆಡವಿರುವ ಪೊಲೀಸರು ಇದರಲ್ಲಿ ಉಳ್ಳಾಲ ನಗರಸಭೆ, ಕೋಟೆಕಾರು ಪಪಂ ಮತ್ತು ಕಂದಾಯ ಇಲಾಖೆಯ ಅಧಿಕಾರಿ ವರ್ಗ ಲಂಚ ಪಡೆದು ಶಾಮೀಲಾಗಿರುವ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ..
![ಕಡಲ್ಕೊರೆತ ಸಂತ್ರಸ್ತರಿಗೆ ಮೀಸಲಿಟ್ಟ ಜಾಗದಲ್ಲಿ ಮನೆ ನಿರ್ಮಾಣ : ಪೊಲೀಸ್ ದಾಳಿ, ಬಿಲ್ಡರ್ ವಿರುದ್ಧ ಪ್ರಕರಣ ದಾಖಲು Builder Sharath Raj](https://etvbharatimages.akamaized.net/etvbharat/prod-images/768-512-14829762-thumbnail-3x2-mng.jpg)
ಬಿಲ್ಡರ್ ಶರತ್ ರಾಜ್
ಈ ಕೋಟ್ಯಂತರ ರೂ. ಮೌಲ್ಯದ ಜಾಗದಲ್ಲಿ ಪ್ರಭಾವಿ ಬಿಲ್ಡರ್ ಶರತ್ ರಾಜ್ ಎಂಬಾತ ಅನಧಿಕೃತವಾಗಿ ಮನೆಗಳನ್ನು ನಿರ್ಮಾಣ ಮಾಡುತ್ತಿದ್ದನು. ಈ ಬಗ್ಗೆ ಉಳ್ಳಾಲ ನಗರಸಭೆ ಮುಖ್ಯಾಧಿಕಾರಿ ರಾಯಪ್ಪ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸರು ಇಂದು ಮಧ್ಯಾಹ್ನ ದಾಳಿ ನಡೆಸಿ, ಅನಧಿಕೃತ ಮನೆ ಕೆಡವಿ ಹಾಕಿದ್ದಾರೆ.
ಇದೀಗ ಬಿಲ್ಡರ್ ಶರತ್ ರಾಜ್ ಮೇಲೆ ಪ್ರಕರಣ ದಾಖಲಾಗಿದೆ. ಈ ಹಗರಣದಲ್ಲಿ ಉಳ್ಳಾಲ ನಗರಸಭೆ, ಕೋಟೆಕಾರು ಪಪಂ ಮತ್ತು ಕಂದಾಯ ಇಲಾಖೆಯ ಅಧಿಕಾರಿ ವರ್ಗ ಲಂಚ ಪಡೆದು ಶಾಮೀಲಾಗಿರುವ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.