ಮಂಗಳೂರು :ಕೊರೊನಾ 2ನೇ ಅಲೆ ಹಿನ್ನೆಲೆ ನಿನ್ನೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದಿಢೀರ್ ದಾಳಿ ನಡೆಸಿದರು. ಈ ವೇಳೆ ಮಾಸ್ಕ್ ಧರಿಸದ ವ್ಯಕ್ತಿಯೊಬ್ಬನನ್ನು ಅಪರಾಧಿಯಂತೆ ಪೊಲೀಸರು ಕರೆದುಕೊಂಡು ಹೋದ ಘಟನೆ ನಡೆದಿದೆ. ಈ ದೃಶ್ಯ ವೈರಲ್ ಆಗಿರೋವಿಡಿಯೋವೊಂದರಲ್ಲಿ ಸೆರೆಯಾಗಿದೆ.
ಜನರಲ್ಲಿ ಮಾಸ್ಕ್ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ದ.ಕ ಜಿಲ್ಲಾಧಿಕಾರಿ ದಿಢೀರ್ ದಾಳಿ ನಡೆಸಿದ್ದರು. ಬಸ್, ಪೆಟ್ರೋಲ್ ಪಂಪ್, ಮಾಲ್ಗಳಿಗೆ ತೆರಳಿ ಮಾಸ್ಕ್ ಧರಿಸದ ಜನರನ್ನು ತರಾಟೆಗೆ ತೆಗೆದುಕೊಂಡು ಕ್ರಮಕ್ಕೆ ಸೂಚಿಸಿದರು.