ಮಂಗಳೂರು/ಉಡುಪಿ : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ! - Airborne collapse in the Arabian Sea
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹೀಗಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜಿಲ್ಲಾಡಳಿತ ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.
![ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ! possibality of heavy rain in Costal](https://etvbharatimages.akamaized.net/etvbharat/prod-images/768-512-7422549-212-7422549-1590942599564.jpg)
ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ
ಮೇ 31 ರಿಂದ ಜೂನ್ 1 ರವರೆಗೆ 115.6 ಮಿ.ಮೀನಿಂದ 204.4 ಮಿ.ಮೀವರೆಗೆ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಆದ್ದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಜಿಲ್ಲಾಡಳಿತ ಮನವಿ ಮಾಡಿದೆ. ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದರೆ ಜಿಲ್ಲಾಡಳಿತದ ಸಹಾಯವಾಣಿ 1077ಗೆ ಕರೆ ಮಾಡುವಂತೆ ತಿಳಿಸಿದೆ.
ಉಡುಪಿಯಲ್ಲಿ ಮುಂದಿನ ಮೂರು ತಾಸು ಭಾರೀ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕರಾವಳಿಯಾದ್ಯಂತ ಮೋಡ ಮುಸುಕಿದ ವಾತಾವರಣವಿದ್ದು, ತುಂತುರು ಮಳೆ ಪ್ರಾರಂಭಗೊಂಡಿದೆ.