ಬೆಳ್ತಂಗಡಿ (ದಕ್ಷಿಣ ಕನ್ನಡ):ವಿದ್ಯುತ್ ಸಂಪರ್ಕದಲ್ಲಾದ ಲೋಪ ಸರಿಪಡಿಸಲು ಹೋಗಿದ್ದ ಮೆಸ್ಕಾಂ ಪವರ್ ಮ್ಯಾನ್ ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಳ್ತಂಗಡಿ: ವಿದ್ಯುತ್ ಶಾಕ್ ತಗುಲಿ ಪವರ್ ಮ್ಯಾನ್ ಸಾವು - ಮೆಸ್ಕಾಂ ಪವರ್ ಮ್ಯಾನ್ ವಿಕಾಸ್
ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಪಿಂಡಿಕಲ್ಲು ಎಂಬಲ್ಲಿ ವಿದ್ಯುತ್ ಸಂಪರ್ಕದಲ್ಲಾದ ಲೋಪ ಸರಿಪಡಿಸಲು ಹೋಗಿದ್ದ ಮೆಸ್ಕಾಂ ಉದ್ಯೋಗಿ ವಿದ್ಯುತ್ ಶಾಕ್ ತಗುಲಿ ಮೃತಪಟ್ಟಿದ್ದಾರೆ.
ವಿದ್ಯುತ್ ಶಾಕ್ ತಗುಲಿ ಪವರ್ ಮ್ಯಾನ್ ಸಾವು
ಕಲ್ಲೇರಿ ಸೆಕ್ಷನ್ ಆಫೀಸ್ನ ಮೆಸ್ಕಾಂ ಪವರ್ ಮ್ಯಾನ್ ವಿಕಾಸ್ ಮೃತ ದುರ್ದೈವಿ. ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಪಿಂಡಿಕಲ್ಲು ಎಂಬಲ್ಲಿ ಕಳೆದ ಎರಡು ದಿನದಿಂದ ಭಾರೀ ಗಾಳಿ, ಮಳೆ ಸುರಿದ ಕಾರಣ ವಿದ್ಯುತ್ ಸಂಪರ್ಕ ಕಡಿತವಾಗಿತ್ತು. ಇದನ್ನು ಸರಿಪಡಿಸಲು ಹೋಗಿದ್ದ ವೇಳೆ ಈ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ, ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಕೊರೊನಾ ಸೋಂಕಿತರಿಗಾಗಿ ಇಡ್ಲಿ ತಯಾರಿಸಿದ ಶಾಸಕ ಎಂ.ಪಿ.ರೇಣುಕಾಚಾರ್ಯ