ಸುಳ್ಯ: ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಬಂಧಿಸಲಾದ ಮೂವರು ಆರೋಪಿಗಳಿಗೆ ಆ.16ರವರೆಗೆ ಪೊಲೀಸ್ ಕಸ್ಟಡಿ ವಿಧಿಸಿ ಸುಳ್ಯ ನ್ಯಾಯಾಲಯವು ಆದೇಶ ನೀಡಿದೆ.
ಪ್ರವೀಣ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಸುಳ್ಯ ನಿವಾಸಿ ಶಿಯಾಬುದ್ದೀನ್ (33), ರಿಯಾಜ್ ಅಂಕತಡ್ಕ(27), ಎಲಿಮಲೆ ನಿವಾಸಿ ಬಶೀರ್(29) ಎಂಬವರನ್ನು ಬೆಳ್ಳಾರೆಯ ವಿವಿಧ ಕಡೆಗಳಲ್ಲಿ ಮತ್ತು ಪ್ರವೀಣ್ ಅವರ ಅಕ್ಷಯ ಚಿಕನ್ ಸೆಂಟರ್ ಬಳಿ ಕರೆದುಕೊಂಡು ಬಂದು ಸ್ಥಳ ಮಹಜರು ನಡೆಸಿದ ಬಳಿಕ ಪೊಲೀಸರು ಗುರುವಾರ ಸಂಜೆ ಆರೋಪಿಗಳನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದರು.