ಸುಳ್ಯ(ದಕ್ಷಿಣ ಕನ್ನಡ):ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಇತೀಚೆಗೆ ಬಂಧಿತರಾಗಿರುವ ಸುಳ್ಯ ನಾವೂರು ನಿವಾಸಿ ಆಬಿದ್ ಮತ್ತು ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಾಲ್‌ನನ್ನು ನಿನ್ನೆ(ಸೋಮವಾರ) ಪುತ್ತೂರು ಡಿವೈಎಸ್ಪಿ ಗಾನಾ.ಪಿ ಕುಮಾರ್ ನೇತೃತ್ವದ ಪೊಲೀಸ್ ತಂಡ ಸುಳ್ಯದ ಆಲೆಟ್ಟಿ ನಗರ ಕ್ರಾಸ್‌ನಲ್ಲಿರುವ ಎಸ್‌ಡಿಪಿಐ ಕಚೇರಿಗೆ ಕರೆ ತಂದು ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಸ್ಥಳ ತನಿಖೆಯ ವೇಳೆ ಪೊಲೀಸರಿಂದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮಾತ್ರವಲ್ಲದೇ ಇವರನ್ನು ಸುಳ್ಯ ಮತ್ತು ಬೆಳ್ಳಾರೆಯ ವಿವಿಧ ಸ್ಥಳಗಳಗೆ ಕರೆತಂದು ಮಹಜರು ಪ್ರಕ್ರಿಯೆ ನಡೆಸಲಾಯಿತು.
ಇದನ್ನೂ ಓದಿ:ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ಮತ್ತಿಬ್ಬರು ಆರೋಪಿಗಳ ಬಂಧನ