ಮಂಗಳೂರು:ಕರ್ನಾಟಕ ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಮಾಡಲಿದ್ದು, ಬಿಗಿ ಭದ್ರತೆ ಏರ್ಪಡಿಸಲಾಗಿದೆ.
ಮಂಗಳೂರಿನಲ್ಲಿ ರಾಷ್ಟ್ರಪತಿ ವಾಸ್ತವ್ಯ: ಪೊಲೀಸ್ ಬಿಗಿ ಬಂದೋಬಸ್ತ್ ಇಂದು ಸಂಜೆ ಮಂಗಳೂರಿಗೆ ಆಗಮಿಸುವ ಅವರು, ನಾಳೆ ಬೆಳಿಗ್ಗೆಯವರೆಗೆ ಮಂಗಳೂರಿನಲ್ಲಿ ವಾಸ್ತವ್ಯ ಇರಲಿದ್ದಾರೆ. ಈ ಹಿನ್ನೆಲೆಯಲ್ಲಿ ಕದ್ರಿ ಸರ್ಕ್ಯೂಟ್ ಹೌಸ್ ಅನ್ನು ಸುಸಜ್ಜಿತಗೊಳಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ರಾಷ್ಟ್ರಪತಿ ಜೊತೆಗೆ ಬರುವ ಅಧಿಕಾರಿ ಹಾಗು ಸಿಬ್ಬಂದಿಗೂ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ.
ಸಂಜೆ 6.15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುವ ರಾಷ್ಟ್ರಪತಿ, 6.45ಕ್ಕೆ ಸರ್ಕ್ಯೂಟ್ ಹೌಸ್ನಲ್ಲಿ ವಾಸ್ತವ್ಯ ಹೂಡಲಿದ್ದರೆ. ರಾತ್ರಿ ಊಟದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲು ನಿರ್ಧರಿಸಲಾಗಿದೆ. ನಾಳೆ ಬೆಳಿಗ್ಗೆ 10.30ಕ್ಕೆ ಸರ್ಕ್ಯೂಟ್ ಹೌಸ್ನಿಂದ ಹೊರಟು 10.45ಕ್ಕೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಶೃಂಗೇರಿಗೆ ತೆರಳಲಿದ್ದಾರೆ. ನಾಳೆ ಸಂಜೆ 4.55ಕ್ಕೆ ಮಂಗಳೂರು ವಿಮಾನ ನಿಲ್ದಾಣದಕ್ಕೆ ಬರುವ ಅವರು 8 ಗಂಟೆಗೆ ದೆಹಲಿಗೆ ವಾಪಸ್ಸಾಗಲಿದ್ದಾರೆ.
ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ವಾಸ್ತವ್ಯ ಹೂಡಲಿರುವ ಸರ್ಕ್ಯೂಟ್ ಹೌಸ್, ಸಾಗುವ ದಾರಿಗಳಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ರಾಷ್ಟ್ರಪತಿಗಳನ್ನು ಕರೆ ತರುವ ಬಗ್ಗೆ ರಿಹರ್ಸಲ್ ನಡೆಸಲಾಗಿದೆ.
ಇದನ್ನೂ ಓದಿ:ರಾಷ್ಟ್ರಪತಿಗಳಿಗೆ ರಾಜಭವನದಲ್ಲಿ ಚಹಾಕೂಟ: ರಾಜ್ಯಪಾಲರು, ಹೈಕೋರ್ಟ್ ನ್ಯಾಯಮೂರ್ತಿಗಳು ಭಾಗಿ