ಪುತ್ತೂರು : ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಗರದಲ್ಲಿ ನಡೆದಿದ್ದು ಆರೋಪಿಯನ್ನು ಬಂಧಿಸುವಲ್ಲಿ ಸಂಪ್ಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಯತ್ನ: ಆರೋಪಿ ಬಂಧನ, ಪೋಕ್ಸೋ ಅಡಿ ಕೇಸ್ ದಾಖಲು - putturu Sexual harassment for a minor sudent
ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಗರದಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಿರುವ ಸಂಪ್ಯ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
15 ವರ್ಷದ ವಿದ್ಯಾರ್ಥಿನಿ ರಜಾ ದಿನವಾದ ಭಾನುವಾರ ಮಧ್ಯಾಹ್ನ ತನ್ನ ಮನೆಯೊಳಗಿನ ಸೋಫಾದ ಮೇಲೆ ಮಲಗಿದ್ದಳು. ಈ ವೇಳೆ, ಆರೋಪಿ ಹಸೈನಾರ್ ಎಂಬಾತ ಮನೆಯ ಬಾಗಿಲು ತಳ್ಳಿ, ಅತ್ಯಾಚಾರಕ್ಕೆ ಯತ್ನಿಸಿರುವುದಾಗಿ ಆರೋಪಿಸಲಾಗಿದೆ. ಬಾಲಕಿಯ ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ. ಆರೋಪಿ ಕೈಯಿಂದ ತಪ್ಪಿಸಿಕೊಂಡ ವಿದ್ಯಾರ್ಥಿನಿ, ಈ ವಿಚಾರವನ್ನು ತಾಯಿಗೆ ತಿಳಿಸಿದ್ದು ಘಟನೆಗೆ ಸಂಬಂಧಿಸಿ ಸೋಮವಾರ ಸಂಪ್ಯ ಪೊಲೀಸರಿಗೆ ದೂರು ನೀಡಿದ್ದಾರೆ.
ಅಪ್ರಾಪ್ತೆಯ ಮಾನಭಂಗಕ್ಕೆ ಯತ್ನಿಸಿದ ಹಿನ್ನೆಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಸಂಪ್ಯ ಪೊಲೀಸರು ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ದೇವಿನಗರ ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಆರೋಪಿ ಹಸೈನಾರ್(25)ನನ್ನು ಬಂಧಿಸಿದ್ದಾರೆ.