ಮಂಗಳೂರು: ಕೊರೊನಾದಿಂದ ಭಾನುವಾರ ಮೃತಪಟ್ಟ ಬಂಟ್ವಾಳದ ಮಹಿಳೆಯ ಪುತ್ರನನ್ನು ಆಸ್ಪತ್ರೆಯಲ್ಲಿ ಭೇಟಿಯಾದ ದ.ಕ. ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.
ಬಂಟ್ವಾಳ: ಕೊರೊನಾದಿಂದ ಮೃತಪಟ್ಟ ಮಹಿಳೆಯ ಪುತ್ರನನ್ನು ಭೇಟಿಯಾದ ಡಿಸಿ ಕಚೇರಿ ಸಿಬ್ಬಂದಿ ಕ್ವಾರಂಟೈನ್ - ಮಂಗಳೂರು ಕೊರೊನಾ
ಕೊರೊನಾದಿಂದ ಮೃತಪಟ್ಟ ಮಹಿಳೆಯ ಪುತ್ರನನ್ನು ಭೇಟಿಯಾದ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.

wenlock
ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಇರುವ ಸಿಬ್ಬಂದಿ ಇತ್ತೀಚಿಗೆ ಕೊರೊನಾದಿಂದ ಮೃತಪಟ್ಟ ಮಹಿಳೆಯ ದೂರದ ಸಂಬಂಧಿಯಾಗಿದ್ದಾರೆ.
ಇವರು ಏಪ್ರಿಲ್ 18ರಂದು ಕೋವಿಡ್ ಆಸ್ಪತ್ರೆಗೆ ತೆರಳಿ ಮೃತ ಮಹಿಳೆಯ ಪುತ್ರನನ್ನು ಭೇಟಿಯಾಗಿ ಯೋಗ-ಕ್ಷೇಮ ವಿಚಾರಿಸಲು ಯತ್ನಿಸಿದ್ದರು. ಇದರ ಮಾಹಿತಿ ಜಿಲ್ಲಾಧಿಕಾರಿ ಕಚೇರಿಗೆ ಸಿಕ್ಕಿದ್ದು ಆ ಹಿನ್ನೆಲೆಯಲ್ಲಿ ಅವರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ.