ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಿಂಗಳ ಕಾಲ ಕೊಂಚ ಬಿಡುವು ಪಡೆದಿದ್ದ ಮಳೆ ನಿನ್ನೆ ಸಂಜೆಯಿಂದ ಮತ್ತೆ ಅಬ್ಬರಿಸುತ್ತಿದೆ. ಇಂದೂ ಕೂಡ ಬೆಳಗ್ಗೆಯಿಂದಲೇ ಮಳೆ ಆರಂಭವಾದ ಪರಿಣಾಮ ಶಾಲೆ, ಕೆಲಸಕ್ಕೆ ಹೋಗುವವರು ತೊಂದರೆ ಅನುಭವಿಸಿದರು.
ದ.ಕ. ಜಿಲ್ಲೆಯಲ್ಲಿ ಮತ್ತೆ ವರುಣನ ಅಬ್ಬರ: ಯಲ್ಲೋ ಅಲರ್ಟ್ ಘೋಷಣೆ - ಪ್ರವಾಹ ಪೀಡಿತ ಪ್ರದೇಶಗಳಾದ ಚಾರ್ಮಾಡಿ, ಡಿಡುಪೆ, ಪರ್ಲಾಣಿ, ಕೊಳಂಬೆ
ತಿಂಗಳ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮಳೆ ಆರ್ಭಟಿಸುತ್ತಿದೆ. ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ಮಳೆ ಹಿನ್ನೆಲೆ ನಾಳೆವರೆಗೆ ಜಿಲ್ಲೆಯಾದ್ಯಂತ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಿನ್ನೆ ಸಂಜೆ ಆರಂಭವಾಗಿರುವ ಮಳೆ ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಾದ ಚಾರ್ಮಾಡಿ, ಡಿಡುಪೆ, ಪರ್ಲಾಣಿ, ಕೊಳಂಬೆ ಮುಂತಾದ ಪ್ರದೇಶಗಳಲ್ಲಿ ಇದ್ದಕ್ಕಿದ್ದಂತೆ ಆರ್ಭಟಿಸಿದ್ದು, ನದಿಗಳು ಉಕ್ಕಿಹರಿಯುತ್ತಿವೆ. ಏಕಾಏಕಿ ನೀರಿನ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಈ ಪ್ರದೇಶಗಳಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ.
ಇನ್ನು ಮಳೆ ಹಿನ್ನೆಲೆ ನಾಳೆವರೆಗೆ ಜಿಲ್ಲೆಯಾದ್ಯಂತ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ ಸಮುದ್ರವೂ ಪ್ರಕ್ಷುಬ್ಧಗೊಂಡಿದ್ದು, ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.