ಮಂಗಳೂರು: ಪಶ್ಚಿಮ ಘಟ್ಟದ ತಪ್ಪಲಿನ ಜನರ ಹಿತವನ್ನು ಪರಿಗಣಿಸಿ ಕಸ್ತೂರಿ ರಂಗನ್ ವರದಿ ಮತ್ತು ಹುಲಿ ಯೋಜನೆಯನ್ನು ಕೈಬಿಡುವಂತೆ ಮಾಜಿ ಸಚಿವ ಬಿ.ರಮಾನಾಥ ರೈ ಒತ್ತಾಯಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಅರಣ್ಯ ಸಚಿವನಿದ್ದಾಗ ಕಸ್ತೂರಿ ರಂಗನ್ ವರದಿ ಜಾರಿ ಮಾಡದಂತೆ ಮತ್ತು ಜಾರಿ ಆಗದ ಹುಲಿ ಯೋಜನೆ ಬಗ್ಗೆ ವಿರೋಧ ವ್ಯಕ್ತಪಡಿಸಲಾಯಿತು. ಕಸ್ತೂರಿ ರಂಗನ್ ವರದಿಯನ್ನು ರದ್ದು ಮಾಡಬೇಕಿರುವುದು ಕೇಂದ್ರ ಸರ್ಕಾರ. ನಾನು ಅರಣ್ಯ ಸಚಿವನಾಗಿದ್ದಾಗ ಇಲ್ಲಿನ ಜನರ ವಿರೋಧವನ್ನು ಪರಿಗಣಿಸಿ ರದ್ದುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು, ದೆಹಲಿಗೆ ತೆರಳಿ ಮಾತುಕತೆ ನಡೆಸಿದ್ದೆ. ಆದರೆ, ಅದನ್ನು ಕೇಂದ್ರ ಸರ್ಕಾರ ರದ್ದು ಪಡಿಸಿಲ್ಲ. ಇದೀಗ ರಾಜ್ಯ ಸರ್ಕಾರ ಮತ್ತೆ ಪತ್ರ ಬರೆದಿರುವುದು ಗಮನಕ್ಕೆ ಬಂದಿದೆ. ಈ ಯೋಜನೆ ಹತ್ತು ರಾಜ್ಯಗಳಿಗೆ ಸಂಬಂಧಪಟ್ಟಿದ್ದು, ಇದನ್ನು ಕೇಂದ್ರ ರದ್ದು ಮಾಡಬೇಕು ಎಂದರು.