ಕರ್ನಾಟಕ

karnataka

ETV Bharat / city

ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ - ಪೊಲೀಸ್

ತಂದೆಯೇ ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ. ತಂದೆ ತನ್ನ ಮೇಲೆ ಮೂರು ಬಾರಿ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತ ಬಾಲಕಿ ಪೊಲೀಸರಿಗೆ ದೂರಿನಲ್ಲಿ ತಿಳಿಸಿದ್ದಾಳೆ.

ಬಾಲಕಿ

By

Published : Apr 6, 2019, 8:46 PM IST

ಮಂಗಳೂರು: ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಆಕೆಯ ತಂದೆಯೇ ನಿರಂತರವಾಗಿ ಅತ್ಯಾಚಾರ ನಡೆಸಿರುವ ಪ್ರಕರಣ ಬಂಟ್ವಾಳ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ದಾವೂದ್ ಅತ್ಯಾಚಾರ ಎಸಗಿದ ಆರೋಪಿ. ಆರೋಪಿ ದಾವೂದ್ ಪಾಣೆ ಮಂಗಳೂರು ನಿವಾಸಿಯಾಗಿದ್ದು, ಕೆಲ ವರ್ಷಗಳ ಹಿಂದೆ ಬಂಟ್ವಾಳಕ್ಕೆ ಬಂದು ವಾಸವಾಗಿದ್ದ. ಈತ ನಾಲ್ಕು ಮದುವೆಯಾಗಿದ್ದು, ಈತನಿಗೆ 15 ಮಕ್ಕಳಿದ್ದಾರೆ. ದಾವೂದ್​ನ ಮೊದಲ ಪತ್ನಿ ಆತನನ್ನು ತೊರೆದು ಹೋಗಿದ್ದು, ಉಳಿದವರು ಬೇರೆ ಬೇರೆ ಕಡೆಗಳಲ್ಲಿ ವಾಸವಾಗಿದ್ದಾರೆ ಎಂದು ತಿಳಿದು ಬಂದಿದೆ.

ತಂದೆ ದಾವೂದ್ ತನ್ನ ಮೇಲೆ ಮೂರು ಬಾರಿ ಅತ್ಯಾಚಾರ ನಡೆಸಿದ್ದಾನೆ. ಎರಡು ಬಾರಿ ಮನೆಯಲ್ಲಿ ಅತ್ಯಾಚಾರ ನಡೆಸಿದ್ದು, ಒಂದು ಬಾರಿ ವಸತಿಗೃಹವೊಂದರಲ್ಲಿ ಅತ್ಯಾಚಾರ ಎಸಗಿದ್ದಾನೆಂದು ಸಂತ್ರಸ್ತ ಬಾಲಕಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾಳೆ. ಕಳೆದ ವಾರ ಸಂತ್ರಸ್ತ ಬಾಲಕಿಯ ಭಾವ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಚೈಲ್ಡ್ ಹೆಲ್ಪ್ ಲೈನ್ ಸಂತ್ರಸ್ತ ಬಾಲಕಿಯನ್ನು ವಿಚಾರಣೆ ನಡೆಸಿದಾಗ ಆಕೆಯ ತಂದೆ ಮೂರು ಬಾರಿ ಅತ್ಯಾಚಾರ ನಡೆಸಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ABOUT THE AUTHOR

...view details