ಮಂಗಳೂರು:ನಗರದಲ್ಲಿ ಆತಂಕಕಾರಿ ಬೆಳವಣಿಗೆ ನಡೆದ ಹಿನ್ನೆಲೆಯಲ್ಲಿ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್. ರಾಜು ಅವರ ಮೂಲಕ ಕೇಂದ್ರ ಸರ್ಕಾರಕ್ಕೆ ವರದಿಯೊಂದನ್ನು ಕಳುಹಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರಲ್ಲಿ ಬಾಂಬ್ ಪತ್ತೆ ಪ್ರಕರಣ: ಡಿಜಿ ಮೂಲಕ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲು ಸಿದ್ಧತೆ - ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
ನಗರದಲ್ಲಿ ಆತಂಕಕಾರಿ ಬೆಳವಣಿಗೆ ನಡೆದ ಹಿನ್ನೆಲೆಯಲ್ಲಿ ಡಿಜಿ ಮೂಲಕ ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸಲು ಸಿದ್ಧತೆ ನಡೆಯುತ್ತಿದೆ.
ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ
ಮಂಗಳೂರು ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟು ದೇಶದ ಆಂತರಿಕ ಭದ್ರತೆಗೆ ಸವಾಲೊಡ್ಡಿರುವ ಪರಿಣಾಮ ಈ ಕುರಿತು ಸಂಪೂರ್ಣವಾಗಿ ವರದಿ ನೀಡಲು ತಯಾರಿ ನಡೆಯುತ್ತಿದೆ.
ವರದಿಯನ್ನು ನೀಲಮಣಿ ರಾಜು ಅವರಿಗೆ ಸಲ್ಲಿಸಲಾಗುತ್ತದೆ. ಅವರು ರಾಜ್ಯ ಸರ್ಕಾರಕ್ಕೆ ಕಳುಹಿಸಿಕೊಡುತ್ತಾರೆ. ಅಲ್ಲಿಂದ ಕೇಂದ್ರ ಸರ್ಕಾರಕ್ಕೆ ತಲುಪಿಸಲಾಗುತ್ತದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಡಾ. ಪಿ.ಎಸ್.ಹರ್ಷ ಮಾಹಿತಿ ನೀಡಿದ್ದಾರೆ.
Last Updated : Jan 24, 2020, 11:07 AM IST