ಸುಬ್ರಹ್ಮಣ್ಯ(ದಕ್ಷಿಣ ಕನ್ನಡ) : ಕನ್ನಡ ಚಿತ್ರರಂಗದ ಖ್ಯಾತ ನಟ, ರಾಕಿಂಗ್ ಸ್ಟಾರ್ ಯಶ್ ಅವರು ಇಂದು ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರ ಧರ್ಮಸ್ಥಳ ಹಾಗೂ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್-2 ಚಿತ್ರತಂಡದ ಜೊತೆ ಯಶ್ ದೇವಾಲಯಗಳಿಗೆ ಭೇಟಿ ನೀಡಿದ್ದಾರೆ.
ಸುಬ್ರಮಣ್ಯಕ್ಕೆ ಯಶ್ ಭೇಟಿ ಸಮಯದಲ್ಲಿ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಲು ಮುಗಿಬಿದ್ದಿದ್ದರು. ಅಭಿಮಾನಿಗಳ ನೂಕುನುಗ್ಗಲಿನಿಂದಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡದೇ ರಾಕಿಂಗ್ ಸ್ಟಾರ್ ದೇಗುಲದಿಂದ ತೆರಳಿದ್ದಾರೆ. ಸುಬ್ರಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಚಿತ್ರತಂಡವನ್ನು ಸ್ವಾಗತಿಸಿದರು. ಬಳಿಕ ಯಶ್ ಹಾಗೂ ಸಂಗಡಿಗರು ಕ್ಷೇತ್ರದಲ್ಲಿ ಶ್ರೀ ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಸದಸ್ಯೆ ಶೋಭಾ ಗಿರಿಧರ್, ಎಇಒ ಪುಷ್ಪಲತಾ, ಶಿಷ್ಟಾಚಾರ ಅಧಿಕಾರಿಗಳು ಉಪಸ್ಥಿತರಿದ್ದರು.