ಮಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಉದ್ಭವಿಸಿದ ವಿವಾದದ ಬಳಿಕ ರೋಹಿತ್ ಚಕ್ರತೀರ್ಥ ಅವರಿಗೆ ಇಂದು ಮಂಗಳೂರಿನಲ್ಲಿ ಆಯೋಜಿಸಿದ್ದ ನಾಗರಿಕ ಸನ್ಮಾನ ಕಾರ್ಯಕ್ರಮವನ್ನು ವ್ಯಾಪಕ ವಿರೋಧದ ಹಿನ್ನೆಲೆಯಲ್ಲಿ ರದ್ದು ಪಡಿಸಲಾಗಿದೆ.
ಸೇವಾಂಜಲಿ ಚಾರಿಟಬಲ್ ಟ್ರಸ್ಟ್ ಸಹಕಾರದಿಂದ ಚಿಂತನಾ ಗಂಗಾದಿಂದ ಮಂಗಳೂರಿನ ಡೊಂಗರಕೇರಿಯ ಕೆನರಾ ಹೈಸ್ಕೂಲಿನ ಸಭಾಂಗಣದಲ್ಲಿ ರೋಹಿತ್ ಚಕ್ರತೀರ್ಥ ಅವರಿಗೆ ಇಂದು ನಾಗರಿಕ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ರೋಹಿತ್ ಚಕ್ರತೀರ್ಥ ಅವರಿಂದ ಭರತ ಖಂಡದ ಗತವೈಭವ ಮತ್ತು ಅಳಿಸಿ ಹೋದ ಇತಿಹಾಸದ ಬಗ್ಗೆ ವಿಚಾರ ಮಂಡನೆ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಿವಿ ಕುಲಪತಿ ಸುಬ್ರಹ್ಮಣ್ಯ ಯಡಪಡಿತ್ತಾಯ ವಹಿಸಿದ್ದರು.