ಬಂಟ್ವಾಳ: ತಾಲೂಕಿನ ಕಾರಿಂಜದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಭಾನುವಾರ 'ರುದ್ರಗಿರಿಯ ರಣಕಹಳೆ' (Rudragiri Ranakahale) ಎಂಬ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ, ವಿವಿಧ ಬೇಡಿಕೆಗಳನ್ನು ಡಿ.21ಒಳಗೆ ಈಡೇರಿಸುವಂತೆ ಹಿಂದೂ ಜಾಗರಣ ವೇದಿಕೆ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ ಕಾರಂತ ಸೂಚಿಸಿದರು.
ಕಾರಿಂಜ ದೇವಸ್ಥಾನದ ರಥಬೀದಿಯಲ್ಲಿ ನಡೆದ ಸಭೆಯಲ್ಲಿ ಭಾಷಣ ಮಾಡಿದ ಅವರು, ದೇವಸ್ಥಾನದ ಪರಿಸರವನ್ನು ಧಾರ್ಮಿಕ ವಲಯವನ್ನಾಗಿ ಘೋಷಿಸಬೇಕು. ಭಕ್ತರ ಅನುಕೂಲತೆಗಾಗಿ ಮುಂದಿನ ಶಿವರಾತ್ರಿಗೆ ಶಿವಮಾಲೆ ಧಾರಣೆ ನಡೆಸಿ ಎಲ್ಲೆಡೆಯಿಂದ ಭಕ್ತರಿಗೆ ಬರಲು ಅನುವು ಮಾಡಿಕೊಡಬೇಕು. ದೇವಸ್ಥಾನಕ್ಕೆ ಅನ್ಯ ಧರ್ಮೀಯರ ಪ್ರವೇಶ ನಿಷೇಧಿಸಬೇಕು. ಪ್ರವಾಸೋದ್ಯಮದ ಹೆಸರಿನಲ್ಲಿ ದೇವಸ್ಥಾನದ ಪಾವಿತ್ರ್ಯತೆ ಕೆಡಿಸಬಾರದು.