ಮಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿ ವಳಚ್ಚಿಲ್ ಎಂಬಲ್ಲಿ ರಸ್ತೆ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಂಗಳೂರು: ಕಪ್ಪು ಬಾವುಟ ಪ್ರದರ್ಶಿಸಿ ಸಿಎಂ ಕಾರು ತಡೆಗೆ ಯತ್ನಿಸಿದ SDPI ಕಾರ್ಯಕರ್ತರು - ಮಂಗಳೂರಿನಲ್ಲಿ ಎಸ್ಡಿಪಿಐ ಕಾರ್ಯಕರ್ತರ ಪ್ರತಿಭಟನೆ
ಸಂತೋಷ್ ಆತ್ಮಹತ್ಯೆ ಪ್ರಕರಣ ಖಂಡಿಸಿ ಮಂಗಳೂರಿನ ವಳಚ್ಚಿಲ್ ಎಂಬಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಿನ್ನೆ(ಮಂಗಳವಾರ)ಯಿಂದ ಮಂಗಳೂರಿನಲ್ಲಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು (ಬುಧವಾರ) ಬಂಟ್ವಾಳದ ಬಂಟರ ಭವನದಲ್ಲಿ ನಡೆಯುತ್ತಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲು ತೆರಳುತ್ತಿದ್ದರು. ಈ ಸಂದರ್ಭ ನಗರದ ಹೊರವಲಯದ ವಳಚ್ಚಿಲ್ ಎಂಬಲ್ಲಿ ತೆರಳುತ್ತಿದ್ದಾಗ ಏಕಾಏಕಿ ಎಸ್ ಡಿಪಿಐ ಕಾರ್ಯಕರ್ತರ ಗುಂಪೊಂದು ಕಪ್ಪು ಬಾವುಟ ಪ್ರದರ್ಶಿಸಿ ಧಿಕ್ಕಾರ ಕೂಗುತ್ತಾ ಆಗಮಿಸಿ ಸಿಎಂ ಕಾರು ಅಡ್ಡಗಟ್ಟಲು ಯತ್ನಿಸಿದೆ. ತಕ್ಷಣ ಪೊಲೀಸರು ಹಾಗೂ ಸಿಎಂ ಭದ್ರತಾ ಸಿಬ್ಬಂದಿ, ಸ್ಥಳಕ್ಕಾಗಮಿಸಿ ಪ್ರತಿಭಟನಾಕಾರರನ್ನು ತಡೆದು, ಅಲ್ಲಿಂದ ಚದುರಿಸಿದರು.
ಇದನ್ನೂ ಓದಿ:ಸಚಿವ ಈಶ್ವರಪ್ಪ ವಿರುದ್ಧ ಎಫ್ಐಆರ್ ಆಗಿದೆ, ಅವರನ್ನು ಕರೆಸಿ ಮಾತಾಡುವೆ; ಸಿಎಂ ಬೊಮ್ಮಾಯಿ