ಮಂಗಳೂರು:ಬ್ಯಾಂಕ್ಗಳ ವಿಲೀನ ಪ್ರಕ್ರಿಯೆ ನಡೆಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಸಿಐಟಿಯು, ಡಿವೈಎಫ್ಐ, ಬಿಇಎಫ್ಐ, ಎಐಕೆಎಸ್ ಸಂಸ್ಥೆಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಇಂದು ಸಂಜೆ ಪ್ರತಿಭಟನೆ ನಡೆಸಿದವು. ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.
ಬ್ಯಾಂಕ್ ನೌಕರರ ಫೆಡರೇಷನ್ನ ರಾಜ್ಯ ಮುಖಂಡ ಬಿ.ಎಂ.ಮಾಧವ ಮಾತನಾಡಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 10 ರಾಷ್ಟ್ರೀಕೃತ ಬ್ಯಾಂಕುಗಳನ್ನು 4 ಬ್ಯಾಂಕ್ಗಳಾಗಿ ವಿಲೀನಗೊಳಿಸಿದ್ದಾರೆ. ಇದು ನಾಲ್ಕು ರಾಷ್ಟ್ರೀಕೃತ ಬ್ಯಾಂಕ್ಗಳ ಹೆಸರನ್ನೇ ಅಳಿಸಿಹಾಕುವ ಪ್ರಯತ್ನ ಎಂದು ಆರೋಪಿಸಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಕೇಂದ್ರ ಸರ್ಕಾರ ಬ್ಯಾಂಕ್ಗಳನ್ನು ವಿಲೀನಗೊಳಿಸಿ ಬೃಹತ್ ಬ್ಯಾಂಕ್ಗಳನ್ನಾಗಿ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಸಣ್ಣ ಬ್ಯಾಂಕ್ಗಳನ್ನು ಜಾಗತಿಕ ಮಟ್ಟದಲ್ಲಿ ಏರಿಸಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಬ್ಯಾಂಕ್ಗಳ ವಿಲೀನ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಣ್ಣ ಬ್ಯಾಂಕ್ ಗಳಲ್ಲಿ ದೊಡ್ಡ ಮಟ್ಟದಲ್ಲಿ ಸಾಲ ಸೌಲಭ್ಯಗಳು ದೊರೆವುದಿಲ್ಲ. ಅವುಗಳನ್ನು ವಿಲೀನಗೊಳಿಸಿದರೆ ಅದಾನಿ, ಅಂಬಾನಿ ಅಂತಹವರಿಗೆ ಕೋಟ್ಯಂತರ ರೂಪಾಯಿ ಸಾಲ ಕೊಡುವ ಉದ್ದೇಶ ಹೊಂದಿದ್ದಾರೆ. ಬಳಿಕ ಅದು ಮರುಪಾವತಿಯಾಗದಿದ್ದಲ್ಲಿ ನಷ್ಟದಲ್ಲಿರುವ ಬ್ಯಾಂಕ್ ನಮಗೆ ಬೇಡ ಎಂದು ಖಾಸಗಿಗೆ ಮಾರುವ ಹುನ್ನಾರವಿದೆ ಎಂದು ಟೀಕಿಸಿದ್ದಾರೆ.
ಕೇಂದ್ರ ಸರ್ಕಾರ ಸಾರ್ವಜನಿಕ ಸಂಸ್ಥೆಗಳನ್ನು ಖಾಸಗೀಕರಣ ಮಾಡುವ ಮೂಲಕ ಅವುಗಳಲ್ಲಿ ಕೆಲಸ ಮಾಡುತ್ತಿರುವವರನ್ನು ನಿರುದ್ಯೋಗಿಗಳನ್ನಾಗಿಸುತ್ತದೆ ಎಂದರು.