ಕರ್ನಾಟಕ

karnataka

ETV Bharat / city

ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ : ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು - ಧರ್ಮಸ್ಥಳ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ

ತಾಯಿಯೊಂಗಿದೆ ಕೆಲಸಕ್ಕೆ ಬಂದಿದ್ದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಪೋಕ್ಸೋ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

Sexual Assault on Impropriety Registration of case under Poxo Act
ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ

By

Published : Sep 12, 2020, 10:07 PM IST

ಬೆಳ್ತಂಗಡಿ :ಪರಿಶಿಷ್ಟ ಪಂಗಡಕ್ಕೆ ಸೇರಿದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕು ಕಳೆಂಜ ಗ್ರಾಮದ ಬಲ್ಕಾಜೆ ಎಂಬಲ್ಲಿ ರೆಜಿಮೊನು ಎಂಬ ವ್ಯಕ್ತಿಯ ತೋಟದ ಕೆಲಸಕ್ಕೆ ಹೋಗಿದ್ದ ಮಹಿಳೆ ಜೊತೆಗೆ ತನ್ನ ಮಗಳು ಕರೆತಂದಿದ್ದಳು. ಈ ಸಂದರ್ಭದಲ್ಲಿ ರೆಜಿಮೊನು ಬಾಲಕಿಯ ಮೇಲೆ ದೈಹಿಕ ಕಿರುಕುಳ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ ತನ್ನ ಕೆಲಸಗಾರನ ಮೂಲಕ ಪ್ರಾಣ ಬೆದರಿಕೆ ಒಡ್ಡಿದ್ದ ಎಂದು ತಿಳಿದು ಬಂದಿದೆ.

ಕೆಲವು ದಿನಗಳ ನಂತರ ಸಂತ್ರಸ್ತ ಬಾಲಕಿ ತಾಯಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಳು. ಇದರಿಂದ ಅಘಾತಗೊಳಗಾಗಿ ಹುಡುಗಿ ಯಾರಲ್ಲೂ ಈ ವಿಚಾರ ತಿಳಿಸಿರಲಿಲ್ಲ. ನಂತರ ಈ ಬಗ್ಗೆ ತನ್ನ ಅಣ್ಣ ಹಾಗೂ ಚಿಕ್ಕಮ್ಮನಿಗೆ ನಡೆದ ವಿಚಾರವನ್ನು ತಿಳಿಸಿದ್ದಳು. ನಂತರ ಸೆಪ್ಟಂಬರ್ 10 ರಂದು ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣ ಕೈಗೆತ್ತಿಕೊಂಡ ಧರ್ಮಸ್ಥಳ ಪೊಲೀಸರು, ಆರೋಪಿಗಳಾದ ರೆಜಿಮೊನು ಹಾಗೂ ಕೃಷ್ಣ ಎಂಬುವವರನ್ನು ಬಂಧಿಸಿ ಪೋಕ್ಸೋ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ABOUT THE AUTHOR

...view details