ಕರ್ನಾಟಕ

karnataka

ETV Bharat / city

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: ಜಾಮೀನು ನಿರಾಕರಿಸಿದ ಹೈಕೋರ್ಟ್..!

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ ಆರೋಪಿ ಮಂಗಳೂರಿನ ಲೋಕಾಯುಕ್ತ ವಿಶೇಷ ಸರ್ಕಾರಿ ನ್ಯಾಯವಾದಿ ಕೆ.ಎಸ್.ಎನ್​ ರಾಜೇಶ್​ ಭಟ್​​​ಗೆ ಹೈಕೋರ್ಟ್ ನಿಂದಲೂ ಜಾಮೀನು ನಿರಾಕರಣೆಯಾಗಿದೆ ಎಂದು ಮಂಗಳೂರು ಪೊಲೀಸ್​ ಆಯುಕ್ತ ಶಶಿಕುಮಾರ್ ಎನ್​. ಮಾಹಿತಿ ನೀಡಿದರು.

sexual-harassment-accused-lawyer-rajesh-bhat-bail-denied
ರಾಜೇಶ್​ ಭಟ್​​​

By

Published : Dec 4, 2021, 3:22 PM IST

Updated : Dec 4, 2021, 3:55 PM IST

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಕಚೇರಿಯಲ್ಲಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಂಗಳೂರಿನ ಲೋಕಾಯುಕ್ತ ವಿಶೇಷ ಸರ್ಕಾರಿ ನ್ಯಾಯವಾದಿ ಕೆ.ಎಸ್.ಎನ್​ ರಾಜೇಶ್​ನಿಗೆ ಹೈಕೋರ್ಟ್ ನಿಂದಲೂ ಜಾಮೀನು ನಿರಾಕರಣೆಯಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ತಿಳಿಸಿದರು.

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ ಕುರಿತು ಪೊಲೀಸ್ ಆಯುಕ್ತರಿಂದ ಮಾಹಿತಿ

ನ್ಯಾಯವಾದಿ ರಾಜೇಶ್​ ಭಟ್​ ಜಾಮೀನು ನಿರಾಕರಣೆ: ಜಿಲ್ಲಾ ನ್ಯಾಯಾಲಯ ಹಾಗೂ ಹೈಕೋರ್ಟ್​ನಲ್ಲಿ ನ್ಯಾಯವಾದಿಗೆ ಯಾಕೆ ಜಾಮೀನು ದೊರೆಯಬಾರದು ಎಂದು ನಾವು ಕೋರ್ಟ್​ಗೆ ಮನವರಿಕೆ ಮಾಡಿದ್ದೇವೆ. ಈ ಹಿನ್ನೆಲೆಯಲ್ಲಿ ಆತನ ಮೇಲೆ ವಾರೆಂಟ್​​ ರಹಿತ ಬಂಧನ ಆದೇಶವನ್ನು ನ್ಯಾಯಾಲಯ ಹೊರಡಿಸಿದೆ ಎಂದರು.

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ : ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದ್ದರೂ, ಇನ್ನೂ ಆರೋಪಿಯ ಬಂಧನ ಸಾಧ್ಯವಾಗಿಲ್ಲ. ಆದರೆ, ಕಾನೂನು ರೀತಿಯಲ್ಲಿ ಆತನಿಗೆ ಪ್ರಕರಣದಿಂದ ಪಾರಾಗದಂತೆ ವ್ಯವಸ್ಥೆ ಮಾಡಲಾಗಿದೆ. ಆತ ದೇಶಬಿಟ್ಟು ಹೋಗದಂತೆ ಲುಕ್ ಔಟ್ ನೋಟೀಸ್ ನೀಡಲಾಗಿದೆ.

ಈಗಾಗಲೇ ಆತನ ಎಲ್ಲಾ ಬ್ಯಾಂಕ್ ಖಾತೆಗಳನ್ನು ಬ್ಲಾಕ್ ಮಾಡಲಾಗಿದೆ. ನ್ಯಾಯವಾದಿಗೆ ಕೃತ್ಯಕ್ಕೆ ಹಾಗೂ ಕೃತ್ಯದ ಬಳಿಕ ಸಹಕರ ನೀಡಿದವರನ್ನು ವಶಕ್ಕೆ ಪಡೆಯಲಾಗಿತ್ತು. ಆರೋಪಿಯನ್ನು ಪತ್ತೆ ಹಚ್ಚುವ ಕಾರ್ಯ ಮುಂದುವರೆದಿದ್ದು, ಶೀಘ್ರ ಆರೋಪಿಯನ್ನು ಪೊಲೀಸರು ಬಂಧಿಸಲಿದ್ದಾರೆ ಎಂದು ಶಶಿಕುಮಾರ್ ಎನ್. ಹೇಳಿದರು.

Last Updated : Dec 4, 2021, 3:55 PM IST

ABOUT THE AUTHOR

...view details