ಮಂಗಳೂರು:ಸ್ಥಳೀಯರನ್ನು ಮತ್ತು ಕನ್ನಡಿಗರನ್ನು ಕಡೆಗಣಿಸಿ ಎಂಆರ್ಪಿಎಲ್ (ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್) ನೇಮಕಾತಿ ನಡೆದಿರುವ ಹಿನ್ನೆಲೆಯಲ್ಲಿ ಸಂಸದರ ಸೂಚನೆ ಮೇರೆಗೆ ನೇಮಕಾತಿ ತಡೆಹಿಡಿಯಲು ಅಧಿಕಾರಿಗಳು ಒಪ್ಪಿದ್ದಾರೆ ಎಂದು ದಕ್ಷಿಣ ವರ್ಷದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಭಾರತ ಸರಕಾರ ಉದ್ಯಮವಾದ ಎಂಆರ್ಪಿಎಲ್ನಲ್ಲಿ 224 ಹುದ್ದೆಗಳಿಗೆ ಇತ್ತೀಚೆಗೆ ನೇಮಕಾತಿ ನಡೆದಿತ್ತು. ಇದರಲ್ಲಿ ಇಬ್ಬರು ದಕ್ಷಿಣ ಕನ್ನಡ, ಇಬ್ಬರು ಉಡುಪಿ ಜಿಲ್ಲೆಯವರು ಮಾತ್ರ ಆಯ್ಕೆಯಾಗಿದ್ದರು. ಕರ್ನಾಟಕದಿಂದ ಕೇವಲ 13 ಮಂದಿ ಮಾತ್ರ ಆಯ್ಕೆಯಾಗಿದ್ದರು. ನೇಮಕಾತಿಯಲ್ಲಿ ಉತ್ತರ ಭಾರತದವರು ಅಧಿಕ ಸಂಖ್ಯೆಯಲ್ಲಿದ್ದರು.
ಎಂಆರ್ಪಿಎಲ್ನಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಬೇಕೆಂದು ಹೋರಾಟ ಮಾಡಿದ್ದ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮತ್ತು ಸ್ಥಳೀಯರು ಈ ನೇಮಕಾತಿ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.