ಕರ್ನಾಟಕ

karnataka

ETV Bharat / city

ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದ ಬಸ್​ಗೆ ಕಲ್ಲು ತೂರಾಟ: ಇಬ್ಬರಿಗೆ ಗಾಯ - undefined

ಮೋದಿ ಚುನಾವಣಾ ಪ್ರಚಾರ ಭಾಷಣದಲ್ಲಿ‌ ಭಾಗವಹಿಸಿ ಹಿಂದಿರುಗುತ್ತಿದ್ದ ಬಸ್​ಗೆ ಕಲ್ಲು ತೂರಾಟ. ಘಟನೆಯಲ್ಲಿ ಇಬ್ಬರಿಗೆ ಗಾಯ. ಕೊಣಾಜೆ ಪೊಲೀಸ್ ಠಾಣೆ ಎದುರು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ.

ಕಲ್ಲು ತೂರಾಟ

By

Published : Apr 13, 2019, 11:08 PM IST

ಮಂಗಳೂರು: ನಗರದಲ್ಲಿ ನಡೆದ ಮೋದಿ ಚುನಾವಣಾ ಪ್ರಚಾರ ಭಾಷಣದಲ್ಲಿ‌ ಭಾಗವಹಿಸಿ ಹಿಂದಿರುಗುತ್ತಿದ್ದ ಜನರಿದ್ದ ಬಸ್​ಗೆ ಕಲ್ಲು ತೂರಾಟ ನಡೆಸಿದ ಘಟನೆ ಮಂಗಳೂರು ಹೊರವಲಯದಲ್ಲಿರುವ ಕುತ್ತಾರು ಮದನಿನಗರ ಎಂಬಲ್ಲಿ ನಡೆದಿದೆ.

ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದೆ. ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ವಾಪಸ್ಸಾಗುತ್ತಿದ್ದ ಈ ಬಸ್ ಮತ್ತು ಬೈಕ್ ನಡುವೆ ಅಪಘಾತ ನಡೆದಿತ್ತು. ಈ ಸಂದರ್ಭ ದುಷ್ಕರ್ಮಿಗಳು ಬಸ್ಸಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಭಟನೆ ಮಾಡುತ್ತಿರುವ ಬಿಜೆಪಿ ಕಾರ್ಯಕರ್ತರು

ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಕೊಣಾಜೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಪ್ರಕರಣವನ್ನು‌ ಗಂಭೀರವಾಗಿ ತೆಗೆದುಕೊಂಡ ಪೊಲೀಸರು ಈಗಾಗಲೇ ಕೆಲವು ಆರೋಪಿಗಳನ್ನು ಬಂಧಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details