ಮಂಗಳೂರು:ವಿದ್ಯಾರ್ಥಿನಿಯೋರ್ವಳ ಮೃತದೇಹ ನಗರದ ಅತ್ತಾವರದ ಮನೆಯೊಂದರಲ್ಲಿ ಪತ್ತೆಯಾಗಿದ್ದು, ಪೊಲೀಸರು ಕೊಲೆಯಾಗಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮಂಜುನಾಥ ವೈ.ಎನ್ ಎಂಬವರ ಪುತ್ರಿ ಅಂಜನಾ ವಶಿಷ್ಠ ಕೊಲೆಯಾಗಿರುವ ವಿದ್ಯಾರ್ಥಿನಿ.

ಅತ್ತಾವರದಲ್ಲಿರುವ ಮೆಡಿಕಲ್ ಕಾಲೇಜು ಬಳಿಯ ಪೆಯೀಂಗ್ ಗೆಸ್ಟ್ನ ರೂಂನಲ್ಲಿ ಮೃತ ದೇಹ ಪತ್ತೆಯಾಗಿದೆ. ಅಂಜನಾ ವಶಿಷ್ಠರ ತಲೆ ಮಂಚದ ಸರಳಿನ ನಡುವೆ ಸಿಲಿಕಿದ್ದು, ಈ ಹಿನ್ನೆಲೆಯಲ್ಲಿ ಯಾರೋ ಕೊಲೆ ಮಾಡಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಆಧಾರ್ ಕಾರ್ಡ್ ಮುಖಾಂತರ ವಿದ್ಯಾರ್ಥಿ ಗುರುತು ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಸ್ಥಳ ಮಹಜರು ಮಾಡಿದ್ದಾರೆ. ಜೊತೆಗೆ ಪ್ರಕರಣದ ತನಿಖೆ ಮುಂದುವರೆಸಿದ್ದಾರೆ.